ವಿವಾಹದ ಬಳಿಕ ಮೊದಲ ಹುಟ್ಟುಹಬ್ಬ ಆಚರಿಸಿಕೊಂಡ ರೇವತಿ ನಿಖಿಲ್
ಬೆಂಗಳೂರು, ಜೂನ್ 21: ಜೆಡಿಎಸ್ ಯುವನಾಯಕ ನಟ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ತಮ್ಮ ಹುಟ್ಟು ಹಬ್ಬನ್ನು ಆಚರಿಸಿ ಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ರೇವತಿ ಕೇಕ್ ಕಟ್ ಮಾಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಅವರು ಏಪ್ರಿಲ್ 16ರಂದು ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಸರಳವಾಗಿ ರೇವತಿ ಅವರನ್ನು ವಿವಾಹವಾಗಿದ್ದಾರೆ. ಜಾಗ್ವಾರ್’ ಚಿತ್ರದ ಮೂಲಕ ನಿಖಿಲ್ ಕುಮಾರ್ ಸ್ವಾಮಿ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಮದುವೆಯ ಬಳಿಕ ರಾಮನಗರದಲ್ಲಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಬಡಜನರಿಗೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ನಿಖಿಲ್ ಕುಮಾರ್ ಸ್ವಾಮಿ ಪತ್ನಿಯೊಂದಿಗೆ ಮಾಧ್ಯಮಗಳ ಮುಂದೆ ಬಂದಿದ್ದರು.
ನಿಖಿಲ್ ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ರೇವತಿ ಮ್ಯಾಂಗೋ ಚೀಸ್ ಕೇಕ್ ಕತ್ತರಿಸುವ ಫೋಟೋ ವನ್ನು ಹಂಚಿಕೊಂಡಿದ್ದು, ಹುಟ್ಟು ಹಬ್ಬದ ಶುಭಾಶಯಗಳು ಚಿನ್ನ ಎಂದು ಬರೆದುಕೊಂಡಿದ್ದಾರೆ