ಕೊರೋನಾ ಭೀತಿಯ ಕಾರಣದಿಂದ ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆಯಾಗಿತ್ತು. ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಏಪ್ರಿಲ್ 29ರಿಂದ ದೂರದರ್ಶನದ ಚಂದನವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರಕಟನೆ ನೀಡಿರುವ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ನಾನು ಈಗಾಗಲೇ ಪ್ರಕಟಿಸಿದಂತೆ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ #ದೂರದರ್ಶನದ_ಚಂದನ_ವಾಹಿನಿಯಲ್ಲಿ # ಏ_29ರಿಂದ #ಪುನರ್ಮನನ (Revision) ತರಗತಿಗಳನ್ನು ಆರಂಭಿಸಲಾಗುತ್ತಿದೆ.
ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ. ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ #ಗಣಿತ ಹಾಗೂ #ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ.
18ನೇ ದಿನದಿಂದ # ಸಮಾಜ_ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ #ಕನ್ನಡ ಮತ್ತು #ಆಂಗ್ಲ_ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ.
ನನ್ನೆಲ್ಲ ವಿದ್ಯಾರ್ಥಿ ಮಿತ್ರರು ಈ ಮಹತ್ವದ ತರಗತಿಗಳನ್ನು ತಪ್ಪದೇ ವೀಕ್ಷಿಸಿ ಮುಂಬರುವ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುತ್ತೀರೆಂಬ ವಿಶ್ವಾಸ ನನ್ನದು ಎಂದಿದ್ದಾರೆ.
AIKYAM CUP 2026–27 – ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ
AIKYAM CUP 2026–27 - ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








