ಬೆಳಗಾವಿ: ಜಿಲ್ಲೆಯ ಪೀರಣವಾಡಿ ಗ್ರಾಮದಲ್ಲಿನ ಸಂಗೋಳಿ ರಾಯಣ್ಣ ಪ್ರತಿಮೆ ತೆರವು ಸಂಬAಧ ಸ್ಥಳೀಯರ ಆಕ್ರೋಶ ಮುಂದುವರೆದಿದೆ.
ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಸಂಗೋಳಿ ರಾಯಣ್ಣ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಮರು ಸ್ಥಾಪನೆ ಮಾಡುವಂತೆ ಸಂಕೇಶ್ವರ ಪಟ್ಟಣದ ಬೀರದೇವರ ದೇವಸ್ಥಾನದಿಂದ ಸಂಗೋಳಿ ರಾಯಣ್ಣ ವೃತ್ತದವರೆಗೆ ರಾಯಣ್ಣ ಅಭಿಮಾನಿಗಳು ಪಾದಯಾತ್ರೆ ನಡೆಸಿದರು.
ಸ್ವಾತಂತ್ರ‍್ಯ ದಿನಾಚರಣೆ ದಿನದಂದು ಪೀರಣವಾಡಿಯಲ್ಲಿ ರಾಯಣ್ಣ ಪ್ರತಿಮೆಯನ್ನು ಜಿಲ್ಲಾಡಳಿತ ತೆರವುಗೊಳಿಸಿರುವುದು ಕನ್ನಡಿಗರಿಗೆ ಹಾಗೂ ಸ್ವಾತಂತ್ರ‍್ಯ ಹೋರಾಟಗಾರನಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅಪಮಾನ ಮಾಡಿದೆ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರು ಸ್ಥಾಪನೆ ಮಾಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ನಂತರ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು, ವಾಲ್ಮೀಕಿ ಸಂಘ, ಹಾಲುಮತ ಸಮಾಜ ಸೇರಿದಂತೆ ರಾಯಣ್ಣ ಅಭಿಮಾನಿಗಳು ಪಾಲ್ಗೊಂಡಿದ್ದರು.
ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ
ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....








