ರೈಸ್ ಬಾತ್
ಅನ್ನ – 1 ಕಪ್
ಕಡಲೆಬೀಜ – 2 ಚಮಚ
ಗೋಡಂಬಿ – 6
ಸಾಸಿವೆ – 1 ಚಮಚ
ಜೀರಿಗೆ – 1 ಚಮಚ
ಕಡಲೆಬೇಳೆ -1 ಚಮಚ
ಕರಿಬೇವು – ಸ್ವಲ್ಪ
ಕೊತ್ತಂಬರಿಸೊಪ್ಪು – ಸ್ವಲ್ಪ
ಈರುಳ್ಳಿ-1
ಹಸಿಮೆಣಸು-2
ಕ್ಯಾರೆಟ್-1
ಬೀನ್ಸ್-3
ಕ್ಯಾಪ್ಸಿಕಂ -1
ನಿಂಬೆ ಹಣ್ಣಿನ ರಸ-2 ಚಮಚ
ಎಣ್ಣೆ
ರುಚಿಗೆ ತಕ್ಕಷ್ಟು ಉಪ್ಪು
ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಸಾಸಿವೆ ಸೇರಿಸಿ. ಅದು ಸಿಡಿದ ಬಳಿಕ ಜೀರಿಗೆ, ಕಡಲೆಬೇಳೆ, ಕಡಲೆಬೀಜ, ಗೋಡಂಬಿ ಸೇರಿಸಿ 2 ನಿಮಿಷ ಹುರಿಯಿರಿ. ಈಗ ಅದಕ್ಕೆ ಚಿಕ್ಕದಾಗಿ ಕತ್ತರಿಸಿದ ಹಸಿಮೆಣಸು, ಈರುಳ್ಳಿ ಹಾಕಿ ಹುರಿಯಿರಿ. ಈರುಳ್ಳಿ ಕೆಂಪಗಾದ ಬಳಿಕ ಕ್ಯಾರೆಟ್, ಬೀನ್ಸ್, ಕ್ಯಾಪ್ಸಿಕಂ ಸೇರಿಸಿ ಚೆನ್ನಾಗಿ ಕೈಯಾಡಿಸಿ. ನಂತರ ಉಪ್ಪನ್ನು ಸೇರಿಸಿ ಮಿಶ್ರ ಮಾಡಿ. ಬಳಿಕ ಇದಕ್ಕೆ ಅನ್ನವನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಈಗ ನಿಂಬೆ ಹಣ್ಣಿನ ರಸವನ್ನು ಸೇರಿಸಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ಈಗ ರುಚಿಯಾದ ರೈಸ್ ಬಾತ್ ಸವಿಯಲು ಸಿದ್ಧವಾಗಿದೆ.