Virat Kohli | ಕೊಹ್ಲಿಯನ್ನ ಹಾಡಿ ಹೊಗಳಿದ ರಿಕಿ ಪಾಂಟಿಂಗ್
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರನ್ ಮಿಷನ್ ವಿರಾಟ್ ಕೊಹ್ಲಿ ಮತ್ತೆ ವಾಪಸ್ ತಮ್ಮ ಹಳೆಯ ಫಾರ್ಮ್ ಗೆ ಮರಳಿದ್ದಾರೆ.
ಏಷ್ಯಾಕಪ್ ನಲ್ಲಿ ಅಫ್ಘಾನ್ ತಂಡದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಸೆಂಚೂರಿ ಸಿಡಿಸಿದರು.
ಇದಾದ ಬಳಿಕ ಭಾರತದಲ್ಲಿ ನಡೆದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು.
ಇನ್ನು ವಿಶ್ವಕಪ್ ನ ವಾರ್ಮ್ಅಪ್ ಮ್ಯಾಚ್ ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಫಲರಾದ್ರೂ ಫೀಲ್ಡಿಂಗ್ ನಲ್ಲಿ ಮಿಂಚಿದರು.
ಇದು ಹೀಗಿದ್ದರೇ ವಿರಾಟ್ ಕೊಹ್ಲಿ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕಿ ಪಾಂಟಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು.

ವೈಟ್ ಬಾಲ್ ಕ್ರಿಕೆಟ್ ನಲ್ಲಿ ಕೊಹ್ಲಿಯಂತಹ ಆಟಗಾರನನ್ನ ನಾನು ಮತ್ತೆ ನೋಡುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ.
ಭಾರತದ ವಾರ್ಮ್ ಅಪ್ ಮ್ಯಾಚ್ ವೇಳೆ ಮಾತನಾಡಿದ ರಿಕಿ ಪಾಂಟಿಂಗ್, ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದರು.
ನಿಜ ಹೇಳಬೇಕೆಂದರೇ ಕೊಹ್ಲಿ ಕ್ಯಾಪ್ಟನ್ಸಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿ ಗೆದ್ದಿದ್ದು ನಿಜಕ್ಕೂ ಅದ್ಭುತ.
ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಕೊಹ್ಲಿ ಯಂತಹ ಆಟಗಾರನನ್ನು ನಾನು ಮತ್ತೆ ನೋಡುತ್ತೇನೆ ಅಂತಾ ಅನಿಸುತ್ತಿಲ್ಲ ಎಂದಿದ್ದಾರೆ.