ರಾಯಚೂರು : ರಿಮ್ಸ್ ಆಸ್ಪತ್ರೆ ಎದುರು ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ ಕಪ್ಪು ಬಟ್ಟೆ ಧರಿಸಿ ನರ್ಸ್ ಗಳು ಪ್ರತಿಭಟನೆ ನಡೆಸಿದ್ದಾರೆ. ರಿಮ್ಸ್ ಆಸ್ಪತ್ರೆಗೆ 2006ರಲ್ಲಿ ನೇಮಕವಾದ ಮೇಲ್ ಆಂಡ್ ಫಿಮೇಲ್ ನರ್ಸ್ ಗಳು ಕೋವಿಡ್ ಫ್ರಂಟ್ ಲೈನ್ ವಾರಿಯರ್ ಗಳಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಇಂಥ ಗಂಭೀರ ಸಮಯದಲ್ಲಿ ನಮ್ಮ ಸುರಕ್ಷಿತೆಯ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ನಮ್ಮನ್ನು ಜ್ಯೋತಿ ಸಂಜೀವಿನಿ ಯೋಜನೆಗೊಳೊಪಡಿಸಬೇಕು. ಹೊಸ ಪಿಂಚಣಿಯನ್ನ ನೀಡುವಂತೆ ಈಗಾಗಲೇ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಸರ್ಕಾರ ನಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ ಹೋರಾಟವನ್ನು ಚುರುಕುಗೊಳಿಸಬೆಕಾಗುತ್ತದೆ ಎಂದು ಪ್ರತಿಭಟನಾ ನಿರತರು ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ
ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಗಣನೀಯ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ...








