ಬೆಂಗಳೂರು : ರಾಜ್ಯದಲ್ಲಿ ಇಂದು 14 ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಕಲಬುರ್ಗಿಯಲ್ಲಿ ಒಬ್ಬರಿಗೆ, ದಾವಣಗರೆಯಲ್ಲಿ ಮೂವರಿಗೆ, ಹಾವೇರಿಯಲ್ಲಿ ಒಬ್ಬರಿಗೆ, ಬೆಂಗಳೂರು ನಗರದಲ್ಲಿ ಒಬ್ಬರಿಗೆ, ಹಾಸನದಲ್ಲಿ ಒಬ್ಬರಿಗೆ, ಮಂಡ್ಯದಲ್ಲಿ ಒಬ್ಬರಿಗೆ, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಒಬ್ಬರಿಗೆ, ಬಾಗಲಕೋಟೆಯ ಇಬ್ಬರಿಗೆ, ವಿಜಯಪುರದ ಒಬ್ಬರಿಗೆ ಮತ್ತು ಬೀದರ್ ನ ಇಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ 14 ಜನರಿಗೆ ಕೊರೋನಾ ಸೋಂಕು ತಗುಲಿ, ಕೊರೋನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.
ಇನ್ನು ಕಿಲ್ಲರ್ ಕೊರೊನಾಗೆ ಇದುವರೆಗೆ 31 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. 426 ಜನರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.








