ಹೆಚ್ಚುತ್ತಿದೆ ಕರಿಮಾರಿ ಹಾವಳಿ : ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 3703ಕ್ಕೆ ಏರಿಕೆ Black Fungus saaksha tv
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರಿಮಾರಿ ಬ್ಲ್ಯಾಕ್ ಫಂಗಸ್ ಹಾವಳಿ ಹೆಚ್ಚಾಗುತ್ತಿದೆ.
ರಾಜ್ಯದಲ್ಲಿ ಈವರೆಗೂ ಒಟ್ಟು 3703 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದ್ದು, 360 ಜನ ಹೆಮ್ಮಾರಿಗೆ ಬಲಿಯಾಗಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಬ್ಲ್ಯಾಕ್ ಫಂಗಸ್ ಕಾಟ ಜೋರಾಗಿದ್ದು, ನಗರದಲ್ಲಿ ಇಲ್ಲಿಯವರೆಗೂ 1174 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿವೆ.
ಜೊತೆಗೆ ಬ್ಲ್ಯಾಕ್ ಫಂಗಸ್ ಗೆ 112ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಅತಿಹೆಚ್ಚು ಬ್ಲ್ಯಾಕ್ ಫಂಗಸ್ ಕೇಸ್ ಗಳು ಪತ್ತೆಯಾಗಿದ್ದು, ವಿಕ್ಟೋರಿಯಾದಲ್ಲಿ 209ಕೇಸ್, ಬೌರಿಂಗ್ ಆಸ್ಪತ್ರೆ 404 ಕೇಸ್, ಕೆಸಿ ಜನರಲ್ 04 ಕೇಸ್, ಇಂದಿರಾಗಾಂಧಿ 3 ಕೇಸ್ ಪತ್ತೆಯಾಗಿದೆ.