ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾಗೇ ಬ್ಯಾಟಿಂಗ್ ಗೆ ಬಂದ.. ಎದುರಿಸಿದ್ದ ಎರಡನೇ ಎಸೆತವನ್ನೇ ಸಿಕ್ಸರ್ ಗಟ್ಟಿದ್ದ.. ಪಂತ್ ಗೆ ಬೆಂಬಲ ನೀಡಿದ ಗ್ರೇಮ್ ಸ್ವಾನ್

admin by admin
July 21, 2020
in Newsbeat, Sports, ಕ್ರೀಡೆ
rishab pant team india saakshatv
Share on FacebookShare on TwitterShare on WhatsappShare on Telegram

ಹಾಗೇ ಬ್ಯಾಟಿಂಗ್ ಗೆ ಬಂದ.. ಎದುರಿಸಿದ್ದ ಎರಡನೇ ಎಸೆತವನ್ನೇ ಸಿಕ್ಸರ್ ಗಟ್ಟಿದ್ದ.. ಪಂತ್ ಗೆ ಬೆಂಬಲ ನೀಡಿದ ಗ್ರೇಮ್ ಸ್ವಾನ್

ರಿಷಬ್ ಪಂತ್.. ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್. ಭಾರೀ ನಿರೀಕ್ಷೆಗಳೊಂದಿಗೆ ಟೀಮ್ ಇಂಡಿಯಾಗೆ ಎಂಟ್ರಿ ಪಡೆದಿದ್ದ ರಿಷಬ್ ಪಂತ್ ಈಗ ತಂಡದಲ್ಲಿ ಸ್ಥಾನ ಪಡೆಯಲು ಒದ್ದಾಡುತ್ತಿದ್ದಾರೆ. ಹಾಗೇ ನೋಡಿದ್ರೆ ರಿಷಬ್ ಪಂತ್ ಟೀಮ್ ಇಂಡಿಯಾ ಪರ ಆಡಲು ಶುರು ಮಾಡಿದಾಗ ಧೋನಿಯ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದರು. ಯಾಕಂದ್ರೆ ರಿಷಬ್ ಪಂತ್ ಅವರ ಬ್ಯಾಟಿಂಗ್ ವೈಖರಿ ಆ ಮಟ್ಟದಲ್ಲಿತ್ತು.
ಆದ್ರೆ ಆ ನಂತರ ರಿಷಬ್ ಪಂತ್ ಪೇಪರ್ ಮೇಲಿನ ಹೀರೋ ಆದ್ರು. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ನಲ್ಲೂ ವೈಫಲ್ಯ ಅನುಭವಿಸಿದ್ರು. ಹೀಗಾಗಿ ರಿಷಬ್ ಪಂತ್ ಟೀಮ್ ಇಂಡಿಯಾದಿಂದ ದೂರ ಉಳಿದ್ರು. ಆದ್ರೂ ರಿಷಬ್ ಪಂತ್ ಅನ್ನೋ ಪ್ರತಿಭಾವಂತ ಆಟಗಾರನ ಬಗ್ಗೆ ಚರ್ಚೆಯಂತೂ ನಡೆಯುತ್ತಿದೆ. ಬಿಸಿಸಿಐ ಅಧ್ಯಕ್ಷ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಸೌರವ್ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಮ್ಮದ್ ಕೈಫ್, ಹಾಗೇ ಇರ್ಫಾನ್ ಪಠಾಣ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ರಿಷಬ್ ಪಂತ್ ಪ್ರತಿಭೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಇದೀಗ ಹೊಸ ಸೇರ್ಪಡೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್. ರಿಷಬ್ ಪಂತ್ ಅವರ ಆಟವನ್ನು ನೋಡಿದಾಗ ತನಗೆ ಏನು ಅನ್ನಿಸಿತ್ತು ಎಂಬುದನ್ನು ಗ್ರೇಮ್ ಸ್ವಾನ್ ಹೇಳಿಕೊಂಡಿದ್ದಾರೆ. ರಿಷಬ್ ಪಂತ್ ಆಟವನ್ನು ನಾನು ಆನಂದಿಸುತ್ತೇನೆ. ಆದ್ರೆ ಆತನಿಗೆ ಬೆಂಬಲ ನೀಡಬೇಕು. ಆತನನ್ನು ನೈಜ ಆಟವನ್ನಾಡಲು ಬಿಡಬೇಕು. ವಿಶ್ವ ಕ್ರಿಕೆಟ್ ನಲ್ಲಿ ಸ್ಟಾರ್ ಆಟಗಾರನಾಗುವ ಎಲ್ಲಾ ಸಾಧ್ಯತೆಗಳಿವೆ. ಆತನಲ್ಲಿ ಅಂತಹುದ್ದೊಂದು ಪ್ರತಿಭೆ ಇದೆ ಎಂದು ಸ್ವಾನ್ ಹೇಳಿದ್ದಾರೆ.
ಇದೇ ವೇಳೆ ಗ್ರೇಮ್ ಸ್ವಾನ್ ಅವರು ರಿಷಬ್ ಪಂತ್ ಅವರ  ಪಂದ್ಯವನ್ನು ನೆನಪಿಸಿಕೊಂಡಿದ್ದಾರೆ. ಅದು 2018ರ ಇಂಗ್ಲೆಂಡ್‍ನ ಟ್ರೆಂಟ್ ಬಿಡ್ಜ್ ಟೆಸ್ಟ್ ಪಂದ್ಯ. ರಿಷಬ್ ಪಂತ್ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದಿದ್ದ. ಬಹುಶಃ ತಾನು ಎದುರಿಸಿದ್ದ ಎರಡನೇ ಎಸೆತವಿರಬೇಕು. ಮೋಯಿನ್ ಖಾನ್ ಎಸೆತವನ್ನು ಸೀದಾ ಪೆವಿಲಿಯನ್‍ಗೆ ಅಟ್ಟಿ ಸಿಕ್ಸರ್ ಬಾರಿಸಿದ್ದ. ಆಗ ನನಗೆ ಅನ್ನಿಸಿದ್ದು ಈತ ಒಬ್ಬ ವಿಶೇಷ ಆಟಗಾರ ಅಂತ. ಆತನಿಗೆ ತಂಡ ಬೆಂಬಲ ನೀಡಬೇಕು ಎಂದು ಗ್ರೇಮ್ ಸ್ವಾನ್ ಅವರು ಅಭಿಪ್ರಾಯಪಟ್ಟಿದ್ದಾರೆ.

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

2018ರಲ್ಲಿ ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್ ನಲ್ಲಿ ಸದ್ದು ಮಾಡಿದ್ದರು. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಶತಕವನ್ನೂ ದಾಖಲಿಸಿದ್ದರು. ಆದ್ರೆ 2019ರಲ್ಲಿ ಪಂತ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲಿಲ್ಲ. ಆಡಿರುವ 13 ಟೆಸ್ಟ್ ಪಂದ್ಯಗಳಲ್ಲಿ ಪಂತ್ ಎರಡು ಶತಕ ಹಾಗೂ ಎರಡು ಅರ್ಧಶತಕ ಸೇರಿದಂತೆ ಒಟ್ಟು 814 ರನ್ ದಾಖಲಿಸಿದ್ದಾರೆ. ಆದ್ರೆ ಏಕದಿನ ಕ್ರಿಕೆಟ್ ನಲ್ಲಿ ಪಂತ್ 16 ಪಂದ್ಯಗಳಲ್ಲಿ ಗಳಿಸಿದ್ದು ಬರೀ 374 ರನ್. ಇದ್ರಲ್ಲಿ ಒಂದು ಅರ್ಧಶತವಿದೆ. ಇನ್ನು 28 ಟಿ-ಟ್ವೆಂಟಿ ಪಂದ್ಯಗಳಲ್ಲಿ ಎರಡು ಅರ್ಧಶತಕ ಸೇರಿದಂತೆ ಒಟ್ಟು 410 ರನ್ ಗಳಿಸಿದ್ದಾರೆ. ಇನ್ನೊಂದೆಡೆ ಐಪಿಎಲ್‍ನಲ್ಲಿ 54 ಪಂದ್ಯಗಳನ್ನು ಆಡಿರುವ ಪಂತ್, 11 ಅರ್ಧಶತಕ, ಒಂದು ಶತಕದೊಂದಿಗೆ ಒಟ್ಟು 1736 ರನ್ ದಾಖಲಿಸಿದ್ದಾರೆ.

Tags: #Graeme Swann#wicket keeperIndian cricketirfan patanmohammad kaifrishab panthteam indiavirat kohli
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram