Rishab Pant | ಸ್ಪೈಡರ್ ಪಂತ್ ಹೆಸರಿಗೆ ಮತ್ತೊಂದು ದಾಖಲೆ
ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದ ಪಂತ್, ಎರಡನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.
ಈ ಮೂಲಕ ಪಂತ್ ಒಂದೇ ಟೆಸ್ಟ್ ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಎನಿಸಿಕೊಂಡರು.
ಈ ಪಂದ್ಯದಲ್ಲಿ ಪಂತ್ ಮೊದಲ ಇನ್ನಿಂಗ್ಸ್‌ನಲ್ಲಿ 146 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 57 ರನ್ ಗಳಿಸಿದ್ದರು.

ಇದಕ್ಕೂ ಮುನ್ನ 1973ರಲ್ಲಿ ಭಾರತದ ಮಾಜಿ ವಿಕೆಟ್ ಕೀಪರ್ ಫಾರೋಖ್ ಇಂಜಿನಿಯರ್ ಇಂಗ್ಲೆಂಡ್ ವಿರುದ್ಧ ಎರಡು ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ ಶತಕ ಮತ್ತು ಹಾಪ್ ಶತಕ ಗಳಿಸಿದ್ದರು.
ಮೊದಲ ಇನಿಂಗ್ಸ್‌ನಲ್ಲಿ 121 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 66 ರನ್ ಗಳಿಸಿದ್ದರು.
ಅದೇ ರೀತಿ ಪಂತ್ (203) ಒಂದೇ ಟೆಸ್ಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ ಬುದ್ದಿ ಕುಂದರನ್ 230 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, ಎಂಎಸ್ ಧೋನಿ 224 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.