ಶೂಟಿಂಗ್ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ : ರಿಷಬ್ ಶೆಟ್ಟಿಗೆ ಗಾಯ
ಹಾಸನ: ಹೀರೋ ಸಿನಿಮಾದ ಶೂಟಿಂಗ್ ವೇಳೆ ನಟ ರಿಷಬ್ ಶೆಟ್ಟಿ ಅವರಿಗೆ ಬೆಂಕಿ ತಗುಲಿದ್ದು, ಅವರು ಗಾಯಗೊಂಡಿದ್ದಾರೆ. ಹಾಸನ ಬೇಲೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಿಷಬ್ ಶೆಟ್ಟಿ ಗಾಯಗೊಂಡಿದ್ದು, ಕೂದಳೆಲೆ ಅಂತರದಲ್ಲಿ ಪ್ರನಾಪಾಯದಿಂದ ಪಾರಾಗಿದ್ದಾರೆ. ಚಿತ್ರೀಕರಣಕ್ಕಾಗಿ ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ಈ ಬೆಂಕಿ ತಗುಲಿದೆ. ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.