ಕೋವಿಡ್ ಸೋಂಕಿನಿಂದ ಗುಣಮುಖರಾದ ಪಂತ್ – ಮೊದಲ ಟೆಸ್ಟ್ ಪಂದ್ಯಕ್ಕೆ ರಿಷಬ್ ಫಿಟ್..?
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮೆನ್ / ವಿಕೆಟ್ ಕೀಪರ್ ರಿಷಬ್ ಪಂತ್ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಹೀಗಾಗಿ ರಿಷಬ್ ಪಂತ್ ಅವರು ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಮೊದಲ ಅಭ್ಯಾಸ ಪಂದ್ಯವನ್ನು ಆಡಿದೆ. ಇದೀಗ ರಿಷಬ್ ಪಂತ್ ಅವರು ಎರಡನೇ ಅಭ್ಯಾಸ ಪಂದ್ಯಕ್ಕೆ ರೆಡಿಯಾಗಿದ್ದಾರೆ. ಅಲ್ಲದೆ ಮೊದಲ ಟೆಸ್ಟ್ ಪಂದ್ಯಕ್ಕೂ ಪಂತ್ ಫುಲ್ ಫಿಟ್ ಆಗಿದ್ದಾರೆ.
ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 4ರಿಂದ ಆರಂಭವಾಗಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಇನ್ನೊಂದೆಡೆ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ. ಶುಬ್ಮನ್ ಗಿಲ್, ಆವೇಶ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಅವರು ಗಾಯದ ಕಾರಣದಿಂದಾಗಿ ಸರಣಿಯಿಂದಲೇ ಹೊರ ನಡೆದಿದ್ದಾರೆ.
ಈ ನಡುವೆ ಟೀಮ್ ಇಂಡಿಯಾಗೆ ಕೋವಿಡ್ ಆತಂಕ ಕೂಡ ಕಾಡಿತ್ತು. ರಿಷಬ್ ಪಂತ್ ಅವರು ಜುಲೈ 8ರಂದು ನಡೆಸಿದ್ದ ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ವರದಿಯಾಗಿತ್ತು. ಬಳಿಕ ರಿಷಬ್ ಪಂತ್ ಅವರಿಗೆ ಬಿಸಿಸಿಐ ಮೆಡಿಕಲ್ ಟೀಮ್ ಚಿಕಿತ್ಸೆ ನೀಡಿತ್ತು. ಅಲ್ಲದೆ ಬ್ರಿಟನ್ ಸರ್ಕಾರದ ಮಾರ್ಗಸೂಚಿಯಂತೆ ಹತ್ತು ದಿನಗಳ ಕಾಲ ಐಸೋಲೇಷನ್ ನಲ್ಲಿದ್ದರು. ನಂತರ ಎರಡು ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗಟಿವ್ ಬಂದಿದ್ದು, ಇದೀಗ ಟೀಮ್ ಇಂಡಿಯಾವನ್ನು ರಿಷಬ್ ಪಂತ್ ಸೇರಿಕೊಂಡಿದ್ದಾರೆ.