Rishabh Pant: ನಾವು ಪ್ಲೇ ಆಫ್ಸ್ ಗೆ ಹೋಗೋದು ಪಕ್ಕಾ ಎಂದ ಪಂತ್
ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೊಂಬಾಟ್ ಗೆಲುವು ದಾಖಲಿಸಿದೆ. ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 6 ವಿಕೆಟ್ಗೆ 160 ರನ್ಗಳಿಸಿತು. ಈ ಸವಾಲು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 18.1 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ಗಳಿಸಿ ಗೆಲುವಿನ ನಗೆಬೀರಿತು. ಈ ಗೆಲುವಿನೊಂದಿಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ-ಆಫ್ ಪ್ರವೇಶಿಸುವ ಕನಸು ಜೀವಂತವಾಗಿ ಇರಿಸಿಕೊಂಡಿದೆ.
ಆದ್ರೆ ಈ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೃಥ್ವಿ ಶಾ ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯದಾಗಿ ಬ್ಯಾಟ್ ಬೀಸಿದರು. ಅವರ ಸ್ಥಾನದಲ್ಲಿ ಬಂದ ಶ್ರೀಕರ್ ಭರತ್, ಮೊದಲ ಪಂದ್ಯದಲ್ಲಿ ಡಕೌಟ್ ಆಗಿದ್ದಾರೆ.
ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಗೆಲುವು ದಾಖಲಿಸಿದ ಬಳಿಕ ಪೃಥ್ವಿ ಶಾ ಬಗ್ಗೆ ಡೆಲ್ಲಿ ನಾಯಕ ರಿಷಬ್ ಪಂತ್ ಮಾಹಿತಿ ನೀಡಿದ್ದಾರೆ. ನಾವು ಪೃಥ್ವಿ ಶಾ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅವರು ಟೈಫಾಯಿಡ್ ತರಹದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಪೃಥ್ವಿ ಶಾ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಮತ್ತೆ ತಂಡ ಸೇರಿಕೊಳ್ಳುತ್ತಾರೋ ಗೊತ್ತಿಲ್ಲ. ಆದ್ರೆ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸೋದು ತುಂಬಾ ಮುಖ್ಯವಾಗಿತ್ತು. ಅದರಂತೆ ನಾವು ಎದುರಾಳಿಯನ್ನು 160 ರನ್ ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದೇವೆ. ನಾವು ಖಂಡಿತವಾಗಿ ಪ್ಲೇ ಆಫ್ಸ್ ಗೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. rishabh-pant-prithvi-shaw-suffers-typhoid-or-similar