Rishabh Pant ರಿಷಬ್ ಪಂತ್ ಕಾಲಿಗೆ ಏನಾಗಿದೆ ?
ಆಸ್ಟ್ರೇಲಿಯಾ ವಿರುದ್ಧ ನಡೆದ ವಾರ್ಮ್ ಅಪ್ ಮ್ಯಾಚ್ ನಲ್ಲಿ ಟೀಂ ಇಂಡಿಯಾ ಆರು ರನ್ ಗಳಿಂದ ಗೆಲುವು ಸಾಧಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 186 ರನ್ ಗಳಿಸಿತು. ನಂತರ ಬೌಲಿಂಗ್ ನಲ್ಲಿ ಎದುರಾಳಿ ತಂಡವನ್ನು 180 ರನ್ ಗಳಿಗೆ ಕಟ್ಟಿ ಹಾಕಿ ಗೆಲುವಿನ ಕೇಕೆ ಹಾಕಿತು.
ಈ ಪಂದ್ಯದ ನಡುವೆ ಟೀಂ ಇಂಡಿಯಾದ ಬ್ಯಾಟರ್ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಬಲ ಮೊಣಕಾಲಿಗೆ ಬ್ಯಾಂಡೇಜ್ ಸುತ್ತಿಕೊಂಡು ಕುಳಿತಿದ್ದದ್ದು ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.

ಮೊಣಕಾಲಿಗೆ ಐಸ್ ಪ್ಯಾಕ್ ಕಟ್ಟಿಕೊಂಡು ಡಗೌಟ್ ನಲ್ಲಿ ಕೂತಿರುವ ರಿಷಬ್ ಪಂತ್ ಫೋಟೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇದನ್ನು ನೋಡಿರುವ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಿಷಬ್ ಪಂತ್ ಕಾಲಿಗೆ ಏನಾಗಿದೆ ? ಅಂತಾ ಪ್ರಶ್ನಿಸುತ್ತಿದ್ದಾರೆ.
ಇನ್ನೂ ಕೆಲವರು ಪಂತ್ ಕಾಲಿಗೆ ಏನು ಆಗಿಲ್ಲ. ಅವರು ರಿಲೀಫ್ ಗಾಗಿ ಆ ರೀತಿ ಹಾಕಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ.