Rishabh Pant ರಿಷಭ್ ಪಂತ್ ಆರೋಗ್ಯದಲ್ಲಿ ಚೇತರಿಕೆ
ಕಾರು ಅಪಘಾತದಲ್ಲಿ ಗಾಯಗೊಂಡ ವಿಕೆಟ್ ಕೀಪರ ರಿಷಭ್ ಪಂತ್ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಪಂತ್ ಆರೋಗ್ಯದ ಕುರಿತು ಆಸ್ಪತ್ರೆಯ ಆಡಳಿಯ ಮಂಡಳಿ ಮಾಹಿತಿ ನೀಡಿಲ್ಲ. ಆದರೆ ಅವರನ್ನು ಭೇಟಿಯಾದ ಕುಟುಂಬ ಸದಸ್ಯರು ಹಾಗೂ ಗೆಳೆಯರು ಪಂತ್ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.
ಪಂತ್ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆ ಇಲ್ಲ ಆದರೆ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡಿದೆ ಎಂದು ಪಂತ್ ಗೆಳೆಯ ಉಮೇಶ್ ಕುಮಾರ್ ಹೇಳಿದ್ದಾರೆ.
ಚೇತರಿಸಿಕೊಳ್ಳುತ್ತಿರುವ ರಿಷಭ್ ಪಂತ್ ಅವರನ್ನು ಕುಟುಂಬ ಸದಸ್ಯರು ಮತ್ತು ಗೆಳೆಯರು ಭೇಟಿಯಾಗುವುದರಿಂದ ಸೋಂಕು ತಗಲುವ ಸಾಧ್ಯತೆ ಇದೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ.
ರಿಷಭ್ ಪಂತ್ ಗುಂಡಿ ತಪ್ಪಿಸಲು ಹೋಗಿದ್ದರಿಂದ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
Rishabh Pant , team india health condition is better