ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ (Pragati Shetty) ಅವರೊಂದಿಗೆ ಸೇರಿ ಅಮೆರಿಕಾದ ವಾಷಿಂಗ್ಟನ್ (Washington) ನ ಸಿಯಾಟಲ್ ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ (Vishwa Shrestha Kannadiga) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ (Rishab Shetty) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು.
ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯೂನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಪ್ರಶಸ್ತಿಯು ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.






