ದೇಶ್ ವಾಸಿಯೋ `ಮತ್ತೆ ತೈಲ ಬೆಲೆ ಏರಿಕೆಯಾಗಿದೆ’ ಹೊಡೀರಿ ಚೆಪ್ಪಾಳೆ..! india
ನವದೆಹಲಿ : ಭಾರತದಲ್ಲಿ ಕೊರೊನಾ ಸಂಕಷ್ಟದ ನಡುವೆ ಜನರಿಗೆ ಪದೇ ಪದೇ ಬೆಲೆ ಏರಿಕೆ ಬರೆ ಬೀಳುತ್ತಲೇ ಇದೆ.
ಇಂದು ಕೂಡ ದೇಶದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಇವತ್ತು ಸರ್ಕಾರ ಸ್ವಾಮ್ಯದ ತೈಲ ಸಂಸ್ಥೆಗಳೂ ಶುಕ್ರವಾರ ಕೂಡ ಪೆಟ್ರೋಲ್ ದರವನ್ನು 37 ಪೈಸೆಯಷ್ಟು ಏರಿಕೆ ಮಾಡಿದೆ. ಆದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ.
ಇಂದು 37 ಪೈಸೆ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.54ಕ್ಕೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.22 ಕ್ಕೆ ತಲುಪಿದೆ.
ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.3 ಕ್ಕೆ ಏರಿಕೆಯಾಗಿದೆ.
ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.1 ಕ್ಕೆ ಏರಿಕೆಯಾಗಿದೆ.









