ಆರ್.ಎನ್ ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್ ಎನ್ ಶೆಟ್ಟಿ ಇನ್ನಿಲ್ಲ RN Shetty no more
ಬೆಂಗಳೂರು, ಡಿಸೆಂಬರ್17: ಆರ್.ಎನ್ ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು, ಸಮಾಜಮುಖಿ ಚಿಂತಕರೂ ಆದ ಶ್ರೀ ಆರ್ ಎನ್ ಶೆಟ್ಟಿ (92) ಇಂದು ನಿಧನರಾಗಿದ್ದಾರೆ. RN Shetty no more
ಡಿಸೆಂಬರ್ 17 ರ ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು ನಿಧನ ಹೊಂದಿದ್ದು, ಪಾರ್ಥಿವ ಶರೀರವನ್ನು ಉತ್ತರ ಹಳ್ಳಿಯ ಆರ್.ಎನ್ ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗುವುದು. ಸಂಜೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.
ಕೃಷಿಕ ಮನೆತನದಲ್ಲಿ ಜನಿಸಿದ ಡಾ. ರಾಮ ನಾಗಪ್ಪ ಶೆಟ್ಟಿ ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಮತ್ತು ಒಂದು ಪವಿತ್ರ ಪುಣ್ಯತಾಣವಾಗಿ ಪರಿವರ್ತಿಸಿದರು. ಮುರುಡೇಶ್ವರದ ಸಮುದ್ರ ತೀರದಲ್ಲಿ 249 ಅಡಿ ಎತ್ತರದ ಭವ್ಯ ಗೋಪುರ ಮತ್ತು ಬೆಟ್ಟದ ಮೇಲೆ 123 ಅಡಿ ಎತ್ತರದ ಭವ್ಯ ಶಿವನ ಮೂರ್ತಿಯನ್ನು ಸ್ಥಾಪಿಸಿದ್ದರು.
ಸಹಾನುಭೂತಿ ಆಧಾರದ ಮೇಲೆ ಉದ್ಯೋಗ ಪಡೆಯಲು ವಿವಾಹಿತ ಮಗಳಿಗೂ ಅವಕಾಶ – ಕರ್ನಾಟಕ ಹೈಕೋರ್ಟ್ ನ ಮಹತ್ವದ ತೀರ್ಪು
ಶ್ರೀ ಆರ್.ಎನ್. ಶೆಟ್ಟಿ ಟ್ರಸ್ಟ್ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣದವರೆಗೆ ವಿದ್ಯಾದಾನ ಮಾಡಿದ್ದ ಇವರ ಈ ಅಸಾಧಾರಣ ಸೇವೆಗೆ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಾಸಿಯಾದ ಕೈಗಾರಿಕಾ ರತ್ನ ಪ್ರಶಸ್ತಿಯೇ ಇತ್ಯಾದಿ ಹಲವಾರು ಗೌರವಗಳು ಸಂದಿವೆ.
ಅವರ ಆರ್ ಎನ್ ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಕರ್ನಾಟಕದ ಅತಿ ದೊಡ್ಡ ಕ್ಯಾಂಪಸ್ ಎನಿಸಿಕೊಂಡಿದ್ದು, ಬೆಂಗಳೂರು ವಿಶ್ವವಿದ್ಯಾಲಯ 2009-10ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮೋಟಾರ್ಸ್ ಕಂಪೆನಿ, ಫೈನಾನ್ಸ್ ಕಂಪೆನಿ, ಆಸ್ಪತ್ರೆಗಳನ್ನು ಸಹ ಅವರು ಸ್ಥಾಪಿಸಿದ್ದರು.
ಸಮಾಜದ ಒಳಿತಿಗಾಗಿ ಸದಾ ಚಿಂತಿಸುತ್ತಿದ್ದ ಹಾಗೂ ಅಸಾಧ್ಯವಾದುದನ್ನೂ ಸಾಧಿಸಿ ತೋರಿಸಿದ ಸಮಾಜಮುಖಿ ಚಿಂತಕ ಆರ್.ಎನ್. ಶೆಟ್ಟಿ ಅವರು ಕೋವಿಡ್ ಸಂದರ್ಭದಲ್ಲಿ ಪಿಎಂ ಕೇರ್ ಗೆ 2.4 ಕೋಟಿ ರೂಪಾಯಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ 5 ಲಕ್ಷ ರೂಪಾಯಿ ಸೇರಿ ಒಟ್ಟು 3 ಕೋಟಿ 9 ಲಕ್ಷ ರೂ. ದೇಣಿಗೆಯನ್ನು ನೀಡಿದ್ದರು.
ಆರ್ ಎನ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ರಾಮುಲು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಸೇವಿಸಬೇಕಾದ ಭಾರತೀಯ ಆಹಾರಗಳುhttps://t.co/y67YjE7rOw
— Saaksha TV (@SaakshaTv) December 15, 2020
ಮೊಬೈಲ್ ಚಾರ್ಜಿಂಗ್ ನಲ್ಲಿ ಇಡುವಾಗ ನೆನಪಿಡಬೇಕಾದ ಅಂಶಗಳುhttps://t.co/JUsVugINo3
— Saaksha TV (@SaakshaTv) December 15, 2020