ಬೆಳಗಾವಿ: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ ಐ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಅವರನ್ನು ಎಸ್ಪಿ ಡಾ.ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಯರಗಟ್ಟಿ ಪಟ್ಟಣದ ನಿವಾಸಿ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕಾಂತ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದರು.
ಅತಿವೇಗದಿಂದ ಬೈಕ್ ಚಲಾಯಿಸುವಾಗ ಹಂಪ್ ಜಿಗಿಸಿ ರಸ್ತೆ ಅಪಘಾತ ಸಂಭವಿಸಿತ್ತು. ಹಿಂದಿನ ತಿಂಗಳಷ್ಟೇ ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಬೆಳಗಾವಿ ಎಸ್ಪಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು. ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ಆರೋಪದ ಮೇರೆಗೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.