ಬೈಕ್ ಅಪಘಾತ | ಇಬ್ಬರು ಯುವಕರ ಸಾವು Saaksha Tv
ಮಂಡ್ಯ: ಅಪರಿಚತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿಯಲ್ಲಿ ನಡೆದಿದೆ.
ಪಣ್ಣೆದೊಡ್ಡಿಯ ವಿನಯ ಮತ್ತು ಹರಹಳ್ಳಿಯ ಪ್ರಸನ್ನ ಮೃತಪಟ್ಟ ದುರ್ದೈವಿಗಳು ಎಂದು ಹೇಳಲಾಗಿದೆ. ಇಬ್ಬರು ಬೈಕನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಂದಿನ ಕ್ರಮ ಕೈಗೊಂಡಡಿದ್ದಾರೆ ಎನ್ನಲಾಗಿದೆ. ಇಬ್ಬರ ಸಾವಿನ ಸುದ್ದಿ ತಿಳಿದು ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.