ಮಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟವನ್ನು ರಸ್ತೆಯಲ್ಲಿಯೇ ಆಯೋಜಿಸಿದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಈ ಇಫ್ತಾರ್ ಕೂಟ ಮಂಗಳೂರು ಹೊರವಲಯ ಮುಡಿಪುವಿನಲ್ಲಿ ರಸ್ತೆಯಲ್ಲಿ ನಡೆದಿತ್ತು. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ಜಾರಿ ಮಾಡಿದೆ. ಈ ಇಫ್ತಾರ್ ಕೂಟವನ್ನು ಆಟೋ ಚಾಲಕರಿಗಾಗಿ ಆಯೋಜಿಸಲಾಗಿತ್ತು. ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಇಫ್ತಾರ್ ಕೂಟದಲ್ಲಿ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.