ಬೆಂಗಳೂರು: ದುಷ್ಕರ್ಮಿಗಳು ಗನ್ ತೋರಿಸಿ, ಕುಟುಂಬಸ್ಥರನ್ನು ಹೆದರಿಸಿ 40 ಲಕ್ಷ ರೂ. ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಹೆದರಿಸಿ ಬರೋಬ್ಬರಿ 40 ಲಕ್ಷ ರೂ. ಹಣ ದೋಚಿದ್ದಾರೆ.
ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯಾರಿಗೂ ಸಂಶಯ ಬರಬಾರದು ಎಂಬ ಕಾರಣಕ್ಕೆ ಕಾರಿಳಿದವರೇ ನೇರವಾಗಿ ಮನೆಗೆ ನುಗ್ಗಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿ, ಈ ಕುರಿತು ದೂರು ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆದಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.