ಫೆಬ್ರವರಿ 20ರಂದು ‘ರಾಬರ್ಟ್’ನ ಲಿರಿಕಲ್ ವಿಡಿಯೋ ಲಾಂಚ್..!
ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮಾರ್ಚ್ 11 ಕ್ಕೆ ರಿಲೀಸ್ ಆಗಲಿದೆ. ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದ್ರೆ ಆಶಾ ನೇಗಿ ನಾಯಕಿಯಾಗಿ ಮಿಂಚಿದ್ದಾರೆ. ಇದೀಗ ದರ್ಶನ್ ಅಭಿಮಾನಿಗಳಿಗೆ ಸಿನಿಮಾ ತಂಡ ಗುಡ್ ನ್ಯೂಸ್ ನೀಡಿದೆ. ಫೆಬ್ರವರಿ 20ರಂದು ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಎಂಬ ಲಿರಿಕಲ್ ಸಾಂಗ್ ರಿಲೀಸ್ ಮಾಡಲು ಸಿನಿಮಾ ತಂಡ ನಿರ್ಧರಿಸಿದೆ. ಫೆಬ್ರವರಿ 20ರ ಸಂಜೆ 4.05ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಈ ವಿಡಿಯೋ ಸಾಂಗ್ ರಿಲೀಸ್ ಆಗಲಿದ್ದು, ಅಭಿಮಾಣಿಗಳು ಫುಲ್ ಖುಷ್ ಆಗಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಲಾಗಿತ್ತು. ಇದೀಗ ಈ ಸಿನಿಮಾದ ಲಿರಿಕಲ್ ವಿಡಿಯೋವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಉಮಾಪತಿ ಶ್ರೀನಿವಾಸ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.