ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಈಗಾಗಲೇ ಪೋಸ್ಟರ್ಸ್ ಹಾಗೂ ಟೀಸರ್ ಮೂಲಕ ಭಾರಿ ಹೈಪ್ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಇದೇ ಬಿಸಿಯಲ್ಲಿ ನಿರ್ದೇಶಕ ತರುಣ್ ಸುಧೀರ್, ಮೊದಲ ಸಾಂಗ್ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದು, ಅಭಿಮಾನಿಗಳನ್ನು ಹುಚ್ಚೇದ್ದು ಕುಣಿಯುವಂತೆ ಮಾಡಿದೆ. ಮಾರ್ಚ್ 3ರಂದು ಸಂಜೆ 05:01ಕ್ಕೆ ಸಿನಿಮಾದ ಮೊದಲ ಹಾಡು ರಿಲೀಸ್ ಮಾಡೋದಾಗಿ ಚಿತ್ರತಂಡ ಮಾಹಿತಿ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡೈರೆಕ್ಟರ್ ತರುಣ್, ಬಾ ಬಾ ಬಾ ನಾ ರೆಡಿ ಅನ್ನೋ ಮೊದಲ ಹಾಡನ್ನ ಮಾರ್ಚ್ 3ರಂದು ಬಿಡುಗಡೆ ಮಾಡಲಿದ್ದೇವೆ. ಇದು ಎಲ್ಲಾ ಡಿ ಬಾಸ್ ಫ್ಯಾನ್ಸ್ ಗೆ ಒಳ್ಳೆ ಟ್ರೀಟ್ ನೀಡಲಿದೆ. ನಾಳೆ ಸಂಜೆ 5 ಗಂಟೆಗೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
RITES ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES) ವತಿಯಿಂದ 15 ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇವುಗಳಲ್ಲಿ ಪ್ರಮುಖವಾಗಿ ಸಹಾಯಕ ವ್ಯವಸ್ಥಾಪಕ, ಸೈಟ್ ಇಂಜಿನಿಯರ್ ಹುದ್ದೆಗಳಿವೆ....