Chamarajanagara | ಬಂಡೆ ಕುಸಿತ.. 10ಕ್ಕೂ ಹೆಚ್ಚು ಸಾವಿನ ಶಂಕೆ
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದಿದ್ದು, 10 ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈ ಸ್ಥಳ ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಕೇರಳ ಮೂಲದ ಉದ್ಯಮಿ ಹಕೀಮ್ ಎಂಬುವವರು ಗುತ್ತಿಗೆ ಪಡೆದು ಬಿಳಿಕಲ್ಲು ಗಣಿಗಾರಿಕೆ ಮಾಡುತ್ತಿದ್ದರಂತೆ.
ಆದ್ರೆ ಗುರುವಾರ ಗಣಿಗಾರಿಕೆ ವೇಳೆಯಲ್ಲಿ ಬಂಡೆಯೊಂದು ಕಿಸಿದಿದ್ದು, 10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಮೃತ ಕಾರ್ಮಿಕರನ್ನು ರಾಜಸ್ಥಾನ, ಉತ್ತರ ಪ್ರದೇಶದ ಮೂಲದವರು ಎಂದು ಹೇಳಲಾಗುತ್ತಿದೆ. Rock fall on tipper in Chamarajanagar









