ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ
ಮೈಸೂರು : ಪ್ಲಾಸ್ಟಿಕ್ ಮುಕ್ತ ಮೈಸೂರು ಮಾಡುವ ನೆಪದಲ್ಲಿ ಹಣ ಲೂಟಿ ಮಾಡಲಾಗಿದೆ. ಬಟ್ಟೆ ಬ್ಯಾಗ್ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಮಾಡಿದ್ದು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಅನುಮತಿ ಪಡೆಯದೆ ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಶಾಸಕ ಸಾ.ರಾ.ಮಹೇಶ್ ಮತ್ತೊಂದು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾ.ರಾ.ಮಹೇಶ್, ಮೈಸೂರು ಜಿಲ್ಲೆಗೆ ಬಂದ ಎಂಟು ಕೋಟಿ ಎಸ್ಎಸ್ಸಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.
ಪ್ಲಾಸ್ಟಿಕ್ ಮುಕ್ತ ಮೈಸೂರು ಮಾಡುವ ನೆಪದಲ್ಲಿ ಹಣ ಲೂಟಿ ಮಾಡಲಾಗಿದೆ. ಬಟ್ಟೆ ಬ್ಯಾಗ್ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಮಾಡಿದ್ದು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಅನುಮತಿ ಪಡೆಯದೆ ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ ಎಂದು ದೂರಿದರು.
ಉಪವಿಭಾಗಾಧಿಕಾರಿಯೊಬ್ಬರ ಪತಿಯೊಬ್ಬ ಬ್ಯಾಗ್ ಸರಬರಾಜು ಗುತ್ತಿಗೆದಾರರಾಗಿದ್ದು, ಅವರಿಂದ ಕಿಕ್ಬ್ಯಾಕ್ ಪಡೆದು ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿದ ಸಾ.ರಾ.ಮಹೇಶ್, ಐದು ಕೆ.ಜಿ. ಬ್ಯಾಗ್ಗೆ 52 ರೂ ಬಿಲ್ ಮಾಡಿ 14,71,458 ಬ್ಯಾಗ್ಗಳ ಖರೀದಿ ಮಾಡಿದ್ದಾರೆ.
ವಾಸ್ತವ ಬೆಲೆ 1.47,14,586 ರೂ. ಆದರೆ 7.65 ಕೋಟಿಯಷ್ಟು ಬಿಲ್ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಮುಂದುವರೆದು ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ ಸಾ.ರಾ.ಮಹೇಶ್, ಇವತ್ತು ಸಿಎಂ, ಸಿಎಸ್ ಭೇಟಿ ಮಾಡುತ್ತೇನೆ. ಸಿಂಧೂರಿಯನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡದಿದ್ರೆ ಧರಣಿ ಕೂರುತ್ತೇನೆ ಎಂದು ಎಚ್ಚರಿಸಿದರು.