Rohini Sindhuri : ಪೀಠೋಪಕರಣಗಳ ಕೊಂಡೊಯ್ದ ಆರೋಪ
ರೋಹಿಣಿ ಸಿಂಧೂರಿ ಅವರ ಪತಿ ವಿರುದ್ಧ ಜಮೀನು ಕಬಳಿಕೆ ಆರೋಪ ಒಂದೆಡೆಯಾದ್ರೆ ಮತ್ತೊಂದೆಡೆ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಾಗ ವಸತಿ ಗೃಹದಲ್ಲಿ ಉಳಿದಿದ್ದ ರೋಹಿಣಿ ಸಿಂಧೂರಿ ಅವರು ಅತಿಥಿಗೃಹದಿಂದ ಪೀಠೋಪಕರಣ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಆಡಳಿತ ತರಬೇತಿ ಸಂಸ್ಥೆಯಿಂದ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ರವಾನಿಸಲಾಗಿದೆ.
40 ದಿನ ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದ ರೋಹಿಣಿ ಸಿಂಧೂರಿ, ಅತಿಥಿಗೃಹದಿಂದ ಜಿಲ್ಲಾಧಿಕಾರಿ ನಿವಾಸಕ್ಕೆ ಹೋಗುವಾಗ ಅತಿಥಿ ಗೃಹದ 12 ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಅತಿಥಿ ಗೃಹದ ಸಾಮಾಗ್ರಿಗಳನ್ನು ವಾಪಸ್ಸು ಕೊಡುವಂತೆ ಆಡಳಿತ ತರಬೇತಿ ಸಂಸ್ಥೆ ಅಧಿಕಾರಿಗಳು 2020 ರಿಂದ ಈ ವೆರೆಗೆ ಮೂರು ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈಗ ಆಡಳಿತ ತರಬೇತಿ ಸಂಸ್ಥೆ ಅಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಆಡಳಿತ ತರಬೇತಿ ಸಂಸ್ಥೆಯ ಅತಿಥಿ ಗೃಹದ ಸಾಮಾಗ್ರಿಗಳು ಜಿಲ್ಲಾಧಿಕಾರಿಗಳ ವಸತಿ ಗೃಹದಲ್ಲಿ ಇದ್ದಲ್ಲಿ ವಾಪಸ್ಸು ಕೊಡಿ. ಸಾಮಾಗ್ರಿಗಳು ಇಲ್ಲದಿದ್ದರೆ ಮಾಹಿತಿ ಕೊಡಿ ಅಂತಾ ಪತ್ರ ಬರೆದಿದ್ದಾರೆ.
ಟೆಲಿಫೋನ್ ಟೇಬಲ್, ಬೆತ್ತದ ಕುರ್ಚಿ, ಮೈಕ್ರೋವೇವ್ ಓವನ್, ಮಂಚ, ಹಾಸಿಗೆ, ಯೋಗಾ ಮ್ಯಾಟ್ ಹೀಗೆ 12 ಸಾಮಾಗ್ರಿ ಇದ್ದರೆ ವಾಪಸ್ಸು ಕೊಡಿ ಅಂತಾ ಪತ್ರ ಬರೆದಿದ್ದಾರೆ.