ಮೈಸೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆಗಳಿವೆ : ರೋಹಿಣಿ ಸಿಂಧೂರಿ ( Rohini Sindhuri )
ಮೈಸೂರು : ದಸರಾ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಮುಂದಿನ 10 ಮತ್ತು 20 ದಿನಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ( Rohini Sindhuri ) ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಕೊರೊನಾ ವಿಚಾರವಾಗಿ ಮಾತನಾಡಿದ ಜಿಲ್ಲಾಧಿಕಾರಿಗಳು, ದಸರಾ ಹಿನ್ನೆಲೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು.
ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 ದಿನದ ನಂತರ ನಾವು ಮತ್ತಷ್ಟು ಹೆಚ್ಚಿನ ಪ್ರಕರಣಗಳು ನಿರೀಕ್ಷಿಸಿದ್ದೇವೆ.
ಆದ್ದರಿಂದ ಜನರು ಮಾಸ್ಕ್ ಹಾಗೂ ಸಾಮಾಜಿಕ ಅಂತರದ ನಿಯಮಗಳನ್ನು ಪಾಲನೆ ಮಾಡಬೇಕಿದೆ ಎಂದು ಮನವಿ ಮಾಡಿದರು.
ಇದೇ ವೇಳೆ ಬೆಡ್ ಸಮಸ್ಯೆ, ಆಕ್ಸಿಜನ್ ಸಮಸ್ಯೆ ವಿಚಾರವಾಗಿ ಮಾತನಾಡಿ ಜಿಲ್ಲೆಯಲ್ಲಿ ಈಗ ಯಾವುದೇ ಬೆಡ್ ಸಮಸ್ಯೆ ಇಲ್ಲ. ಆಕ್ಸಿಜನ್ ಹಾಗೂ ಟೆಸ್ಟಿಂಗ್ ನಲ್ಲೂ ಯಾವುದೇ ಕೊರತೆ ಇಲ್ಲ. ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ 50 ಬೆಡ್, ಆಕ್ಸಿಜನ್ ಬೆಡ್, ಐಸಿಯುಗಳು ಲಭ್ಯವಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಉಮಾಶ್ರೀ ಬಾಗಲಕೋಟೆ ಮನೆಗೆ ಕನ್ನ ಹಾಕಿದ ಖದೀಮರು..!
ಆರಂಭದಲ್ಲಿ ಕೊರೊನಾ ವೈರಸ್ ಅನ್ನು ಜಿಲ್ಲೆಯಲ್ಲಿ ಉತ್ತಮವಾಗಿ ನಿರ್ವಹಣೆ ಮಾಡಿದ್ದರು. ಆದರೆ ಆ ಬಳಿಕ ಕೆಲ ಕಾರಣಗಳಿಂದ ಸೋಂಕು ಹೆಚ್ಚಾಗಿತ್ತು. ಈಗ ನಾವು ಮತ್ತೆ ಎಲ್ಲವನ್ನು ಹಿಡಿತಕ್ಕೆ ತಂದಿದ್ದೇವೆ ಎಂದ ರೋಹಿಣಿ ಸಿಂಧೂರಿ ಅವರು, ಈಗ ದಸರಾ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಮುಂದಿನ 10 ಮತ್ತು 20 ದಿನಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುವ ನಿರೀಕ್ಷೆ ಇದೆ ಎಂದರು.
ಅನ್ ಲಾಕ್ ಪರಿಣಾಮವಾಗಿ ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಜನರಿಗೆ ಬರಬೇಡಿ ಎಂದು ಹೇಳಲು ಆಗುವುದಿಲ್ಲ. ಈಗ ಮೈಸೂರಿನ ಎಲ್ಲಾ ಹೋಟೆಲ್, ರೆಸಾರ್ಟ್ ಗಳು ತುಂಬಿದೆ.
ಮೈಸೂರಿಗೆ ಬರುವ ಪ್ರವಾಸಿಗರಿಗೆ ಎಲ್ಲೋ ಒಂದು ಸ್ಥಳದಲ್ಲಿ ಕೊರೊನಾ ಟೆಸ್ಟ್ ನಡೆಯಬೇಕು ಎಂಬುವುದು ನಮ್ಮ ಉದ್ದೇಶ. ಆದ್ದರಿಂದ ಮೃಗಾಲಯ ಮತ್ತು ಬೆಟ್ಟದ ಮೇಲೆ ಕೊರೊನಾ ಟೆಸ್ಟ್ ನಡೆಸುವಷ್ಟು ಸ್ಥಳಾವಕಾಶ ಲಭ್ಯವಾಗದ ಕಾರಣ ಅರಮನೆ ಆವರಣದಲ್ಲಿ ಸ್ಕ್ರೀನಿಂಗ್ ಮಾಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿಗಳು ಪ್ರಶ್ನೆವೊಂದಕ್ಕೆ ಉತ್ತರ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel