“KOHLI ಗಿಂತ ROHIT ಬೆಸ್ಟ್ ಟೆಸ್ಟ್ ಕ್ಯಾಪ್ಟನ್” ಅಂತೆ…
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಶ್ರೇಷ್ಠ ಟೆಸ್ಟ್ ಕ್ಯಾಪ್ಟನ್ ಎಂದು ಮಾಜಿ ಕ್ರಿಕೆಟಿಗ ವಾಸೀಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ಬಳಿಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಗೆಲುವಿನ ಓಟ ಮುಂದುವರೆಸಿದೆ.
ಇತ್ತೀಚೆಗೆ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗ ವಾಸೀಂ ಜಾಫರ್, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ಎಷ್ಟು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೋ ನನಗೆ ಗೊತ್ತಿಲ್ಲ.
ಆದ್ರೆ ವಿರಾಟ್ ಕೊಹ್ಲಿಗಿಂತ ಬೆಸ್ಟ್ ಕ್ಯಾಪ್ಟನ್ ಆಗುತ್ತಾರೆ. ಅವರ ನೇತೃತ್ವದಲ್ಲಿ ಟೀಂ ಇಂಡಿಯಾ ಇನ್ನಷ್ಟು ಕ್ಲೀನ್ ಸ್ವೀಪ್ ಗಳನ್ನ ಸಾಧಿಸಲಿದೆ ಎಂದಿದ್ದಾರೆ.
ರೋಹಿತ್ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗುವುದು ಖಚಿತ. ಟೀಂ ಇಂಡಿಯಾ ನಾಯಕತ್ವದ ಹಿಡಿತ ಇದೀಗ ಸರಿಯಾದ ಕೈಯಲ್ಲಿದೆ ಎಂದು ನಾನು ನಂಬುತ್ತೇನೆ ಎಂದು ವಾಸಿಂ ಜಾಫರ್ ಹೇಳಿದ್ದಾರೆ.