Rohit Sharma | ವಿಶ್ವದಾಖಲೆ ಬರೆದ ಹಿಟ್ ಮ್ಯಾನ್.. ವಿಶ್ವದ ಮೊದಲ ಆಟಗಾರ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20ಯಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಧರ್ಮಶಾಲಾ ಅಂಗಳದಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ತಮ್ಮ ಟಿ 20 ವೃತ್ತಿ ಜೀವನದಲ್ಲಿ 125 ಪಂದ್ಯಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜೊತೆಗೆ ಪಾಕಿಸ್ತಾನದ ಶೋಯೆಬ್ ಮಲಿಕ್ ದಾಖಲೆ ಮುರಿದರು.
ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಪಾಕಿಸ್ತಾನ ಕ್ರಿಕೆಟರ್ ಶೋಯೆಬ್ ಮಲಿಕ್ 124 ಟಿ20 ಪಂದ್ಯಗಳನ್ನಾ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ ಮಲಿಕ್ ಅವರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೆರಿದ್ದಾರೆ. ಮಲಿಕ್ 124 ಪಂದ್ಯಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ 119 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 100ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಆಟಗಾರರ ಪೈಕಿ ಶರ್ಮಾ ಈ ಸಾಧನೆ ಮಾಡಿದ ಏಕೈಕ ಆಟಗಾರ.
ರೋಹಿತ್ ಶರ್ಮಾ ಬಳಿಕ ಟೀಂ ಇಂಡಿಯಾ ಪರ ಅತಿ ಹೆಚ್ಚು ಟಿ 20 ಪಂದ್ಯಗಳನ್ನಾಡಿರುವ ಆಟಗಾರರ ಪಟ್ಟಿ ಹೀಗಿದೆ.
ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 98 ಟಿ 20 ಪಂದ್ಯಗಳನ್ನಾಡಿದ್ದಾರೆ. ವಿರಾಟ್ ಕೊಹ್ಲಿ 97 ಪಂದ್ಯಗಳನ್ನು ಆಡಿದ್ದಾರೆ.
ಇನ್ನು ಮೂರನೇ ಪಂದ್ಯದ ವಿಚಾರಕ್ಕೆ ಬಂದರೆ.. ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. 147 ರನ್ಗಳ ಗುರಿಯನ್ನು ಭಾರತ 16.5 ಓವರ್ಗಳಲ್ಲಿ ತಲುಪಿತು. ಟೀಂ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಮತ್ತೊಮ್ಮೆ ಅಬ್ಬರಿಸಿದರು. ಅವರು 45 ಎಸೆತಗಳಲ್ಲಿ 73 ರನ್ ಗಳಿಸಿ ಅಜೇಯರಾಗುಳಿದರು. Rohit sharma-becomes-most-capped-t20i-player









