ಲಕ್ಕಿ Rohit Sharma… ಆ ದಾಖಲೆ ಮಾಡಿದ 2ನೇ ಕ್ಯಾಪ್ಟನ್
ಹಿಟ್ ಮ್ಯಾನ್ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಸ್ವದೇಶದಲ್ಲಿ ನಡೆದ ಎಲ್ಲ ಪಂದ್ಯಗಳಲ್ಲಿಯೂ ಗೆಲುವು ಸಾಧಿಸುತ್ತಿದೆ. ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ರೋಹಿತ್ ಮೊದಲು ಟಿ 20 ಕ್ರಿಕೆಟ್ ನಲ್ಲಿ ತಂಡವನ್ನು ಗೆಲ್ಲಿಸಿದ್ರು. ಬಳಿಕ ಏಕದಿನ ತಂಡದ ನಾಯಕತ್ವ ವಹಿಸಿಕೊಂಡ ಬಳಿಕ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದರು.
ಇದೀಗಟೆಸ್ಟ್ ನಲ್ಲೂ ತಂಡವನ್ನು ಮುನ್ನಡೆಸಿ ಮೊದಲ ಪಂದ್ಯದಲ್ಲಿಯೇ ಯಶಸ್ಸು ಸಾಧಿಸಿದ್ದಾರೆ. ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 222 ರನ್ ಗಳ ಜಯ ದಾಖಲಿಸಿದೆ.
ಅಂದಹಾಗೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕತ್ವ ವಹಿಸಿಕೊಂಡ ಬಳಿಕ ಮೊದಲ ಪಂದ್ಯದಲ್ಲೇ ಇನ್ನಿಂಗ್ಸ್ ಜೊತೆಗೆ ಪಂದ್ಯ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
1955/56 ರಲ್ಲಿ ಮುಂಬೈ ಬಿಎಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಇನ್ನಿಂಗ್ಸ್ ಮತ್ತು 27 ರನ್‌ಗಳೊಂದಿಗೆ ಟೀಂ ಇಂಡಿಯಾ ಗೆದ್ದಿತ್ತು. ಈ ಪಂದ್ಯದಲ್ಲಿ ಪೋಲಿ ಉಮ್ರಿಗರ್ ಚೊಚ್ಚಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ತನ್ನ ಚೊಚ್ಚಲ ಟೆಸ್ಟ್ ಅನ್ನು ಇನ್ನಿಂಗ್ಸ್‌ನಿಂದ ಗೆದ್ದಿದ್ದಾರೆ. Rohit Sharma becomes the second Indian captain