ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯ ಗೆದ್ದ ಭಾರತ 5 ಟೆಸ್ಟ್ ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಳಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಿದ 13 ಟೆಸ್ಟ್ಗಳಲ್ಲಿ ಇದು 7 ನೇ ಗೆಲುವಾಗಿದ್ದು, ಈ ಗೆಲುವಿನೊಂದಿಗೆ ರೋಹಿತ್, ಧೋನಿ ದಾಖಲೆ ಮುರಿದಿದ್ದಾರೆ.
ಈ ಗೆಲುವಿನ ಮೂಲಕ ರೋಹಿತ್ ಶರ್ಮಾ ಭಾರತದ ಅತ್ಯಂತ ಯಶಸ್ವಿ ನಾಯಕ ಧೋನಿಯನ್ನು ಹಿಂದಿಕ್ಕಿದ್ದಾರೆ. ರೋಹಿತ್ ಈಗ ಭಾಝ್ ಬಾಲ್ ಯುಗದಲ್ಲಿ ಇಂಗ್ಲೆಂಡ್ ತಂಡವನ್ನು ಟೆಸ್ಟ್ ಪಂದ್ಯದಲ್ಲಿ ಸೋಲಿಸಿದ ಮೊದಲ ಏಷ್ಯಾದ ನಾಯಕ ಎನಿಸಿಕೊಂಡಿದ್ದಾರೆ.
ಎಂಎಸ್ ಧೋನಿ ಭಾರತ ಗೆದ್ದಿರುವ 295 ಪಂದ್ಯಗಳಲ್ಲಿ ತಂಡದ ಭಾಗವಾಗಿದ್ದರು. ಆದರೆ, ರೋಹಿತ್ ರೋಹಿತ್ ಅವರ 29 ನೇ ಪಂದ್ಯಗಳಲ್ಲಿ ಗೆದ್ದ ಭಾಗವಾಗಿದ್ದಾರೆ. ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ, ಭಾರತ ಗೆದ್ದ 313 ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ನಾಯಕನಾಗಿ ರೋಹಿತ್ ಅವರ ಟೆಸ್ಟ್ ವೃತ್ತಿಜೀವನವನ್ನು ಗಮನಿಸಿದರೆ, ಅವರು 54 ಪ್ರತಿಶತ ಪಂದ್ಯಗಳನ್ನು ಗೆದ್ದಿದ್ದಾರೆ. ಪದೇ ಪದೇ ರೋಹಿತ್ ವೈಫಲ್ಯ ಅನುಭವಿಸುತ್ತಿರುವುದು ತಂಡಕ್ಕೆ ತಲೆನೋವಾಗಿದೆ. ಕಳೆದ 8 ಇನ್ನಿಂಗ್ಸ್ಗಳಲ್ಲಿ ಒಂದೇ ಒಂದು ಅರ್ಧಶತಕ ಕೂಡ ಗಳಿಸಿಲ್ಲ.