Rohit Sharma : ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಚುಟುಕು ಕ್ರಿಕೆಟ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಟಿ20 ಮಾದರಿಯಲ್ಲಿ ಸತತ 13 ಗೆಲುವು ಸಾಧಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸೌತಾಂಪ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ಗೆಲುವಿನೊಂದಿಗೆ ರೋಹಿತ್ ಶರ್ಮಾ ಈ ಸಾಧನೆಯನ್ನು ತಮ್ಮ ಖಾತೆಗೆ ಹಾಕಿಕೊಂಡರು.
ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾದ ಸಾರಥ್ಯವಹಿಸಿರುವ ರೋಹಿತ್ ಶರ್ಮಾ, ಟಿ 20 ಕ್ರಿಕೆಟ್ ನಲ್ಲಿ ಸತತ ಗೆಲುವುಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ.

ಸ್ವದೇಶದಲ್ಲಿ ನ್ಯೂಜಿಲೆಂಡ್, ವೆಸ್ಟ್ ಇಂಡಿಸ್, ಶ್ರೀಲಂಕಾ ಪ್ರವಾಸದಲ್ಲಿ ನಡೆದ ಪಂದ್ಯದಲ್ಲಿ ಹಿಟ್ ಮ್ಯಾಚ್ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.
ಇಂಗ್ಲೆಂಡ್ ವಿರುದ್ಧದ ಟಿ 20 ಪಂದ್ಯದ ಮೂಲಕ ಮೊದಲ ಬಾರಿಗೆ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ವಿದೇಶಿ ನೆಲದಲ್ಲಿ ಮುನ್ನಡೆಸಿದರು.
ಅದರಂತೆ ಪಂದ್ಯ ಗೆದ್ದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 14 ಎಸೆತಗಳಲ್ಲಿ ಐದು ಬೌಂಡರಿ ಸಹಿತ 24 ರನ್ ಗಳಿಸಿದ್ರು.