ಟಿ 20 ಕ್ರಿಕೆಟ್ ನ “ಕಿಂಗ್ ರೋಹಿತ್” ಶರ್ಮಾ – Saaksha Tv
ಶ್ರೀಲಂಕಾ ವಿರುದ್ಧ ಲಕ್ನೋದಲ್ಲಿ ಅಬ್ಬರಿಸುವ ಮೂಲಕ ಟೀಂ ಇಂಡಿಯಾದ ನಾಯಕ ರೋಹಿತ್ ಹೊಸ ದಾಖಲೆ ಬರೆದಿದ್ದಾರೆ. ಲಂಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ, 44 ರನ್ ಬಾರಿಸಿದ್ದರು. ಈ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದರು.
ಟಿ 20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಈ ಹಿಂದೆ ಅಗ್ರಸ್ಥಾನದಲ್ಲಿದ್ದರು. ಗಪ್ಟಿಲ್ 112 ಟಿ20 ಪಂದ್ಯಗಳಿಂದ 3299 ರನ್ ಕಲೆಹಾಕಿದ್ದರು. ಇದೀಗ ರೋಹಿತ್ ಶರ್ಮಾ 3307 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 97 ಟಿ20 ಪಂದ್ಯಗಳಿಂದ 3296 ರನ್ ಬಾರಿಸಿದ್ದಾರೆ.








