ಫಿಟ್ ನೆಸ್ ಟೆಸ್ಟ್ ನಲ್ಲಿ ರೋಹಿತ್ ಪಾಸ್..!
ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಫಿಟ್ ನೆಸ್ ಟೆಸ್ಟ್ ನಲ್ಲಿ ಪಾಸಾಗಿದ್ದಾರೆ.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಇಂದು ನಡೆದ ಫಿಟ್ ನೆಸ್ ಟೆಸ್ಟ್ ನಡೆಸಲಾಗಿತ್ತು. ಈ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ಪಾಸಾಗಿದ್ದು, ಆಸ್ಟ್ರೇಲಿಯಾಕ್ಕೆ ಯಾವಾಗ ಪ್ರಯಾಣ ಬೆಳೆಸುವುದು ಅನ್ನೋದನ್ನು ಬಿಸಿಸಿಐ ಮತ್ತು ಆಯ್ಕೆ ಸಮಿತಿ ನಿರ್ಧಾರ ಮಾಡಲಿದೆ.
ರೋಹಿತ್ ಶರ್ಮಾ ಫಿಟ್ ನೆಸ್ ಟೆಸ್ಟ್ ನಲ್ಲಿ ಪಾಸಾಗಿದ್ದಾರೆ. ಮುಂದಿನ ನಿರ್ಧಾರಗಳನ್ನು ಬಿಸಿಸಿಐ ಮತ್ತು ಆಯ್ಕೆ ಸಮಿತಿ ನಿರ್ಧಾರ ಮಾಡಲಿದೆ ಎಂದು ತಿಳಿದು ಬಂದಿದೆ.
ಐಪಿಎಲ್ ಟೂರ್ನಿಯ ವೇಳೆ ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೊಳಾಗಾಗಿದ್ದರು. ಎರಡು ಮೂರು ಪಂದ್ಯಗಳಿಂದಲೂ ಹೊರುಗುಳಿದಿದ್ದರು. ಆದ್ರೆ ಮಹತ್ವದ ಪಂದ್ಯದಲ್ಲಿ ಆಡಿ
ಮುಂಬೈ ಇಂಡಿಯನ್ಸ್ ತಂಡವನ್ನು ಐದನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
ಐಪಿಎಲ್ ನಂತರ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ರೋಹಿತ್ ಅವರು ಕಳೆದ ನವೆಂಬರ್ 19ರಿಂದ ಬೆಂಗಳೂರಿನ ಎನ್‍ಸಿಎ ನಲ್ಲಿದ್ದರು. ಇಂದು ಅವರಿಗೆ ಫಿಟ್ ನೆಸ್ ಪರೀಕ್ಷೆ ನಡೆಸಲಾಗಿತ್ತು.
ಒಂದು ಮೂಲಗಳ ಪ್ರಕಾರ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ. ಆಸ್ಟ್ರೇಲಿಯಾಗೆ ತೆರಳಿದ ನಂತರ ರೋಹಿತ್ ಶರ್ಮಾ ಅವರು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಆ ನಂತರವೇ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ.








