ENG vs IND : ಟಿ 20 ಯಲ್ಲಿ ರೋಹಿತ್ ಅಪರೂಪದ ಸಾಧನೆ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20ಯಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.
ರೋಹಿತ್ ಟಿ20 ಮಾದರಿಯಲ್ಲಿ 300 ಬೌಂಡರಿಗಳನ್ನು ಬಾರಿಸಿದ ಎರಡನೇ ಕ್ರಿಕೆಟಿಗ ಎನಿಸಿಕೊಂಡರು.
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ರೋಹಿತ್ ಈ ಅಪರೂಪದ ದಾಖಲೆ ಬರೆದಿದ್ದಾರೆ.

ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬುದು ಗಮನಾರ್ಹ.
ಒಟ್ಟಾರೆಯಾಗಿ ಐರ್ಲೆಂಡ್ನ ಸ್ಟಾರ್ ಆಟಗಾರ ಪಾಲ್ ಸ್ಟಿರ್ಲಿಂಗ್ 325 ಬೌಂಡರಿಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ರೋಹಿತ್ 301 ಬೌಂಡರಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಅಂತೆಯೇ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಸಿಕ್ಸರ್ಗಳಲ್ಲಿ ಗುಪ್ಟಿಲ್ (165) ಮೊದಲ ಸ್ಥಾನದಲ್ಲಿದ್ದರೆ, ರೋಹಿತ್ (157) ಸಿಕ್ಸರ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.