Rohit Sharma | ಹಿಟ್ ಮ್ಯಾನ್ ಅಲ್ಲ.. ಸಿಕ್ಸರ್ ಮ್ಯಾನ್
ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಸಿಕ್ಸರ್ ವಿಷಯದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ಸಿಕ್ಸರ್ ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಆಗಿ ಹಿಟ್ ಮ್ಯಾಚ್ ನಿಂತಿದ್ದಾರೆ.
ಶುಕ್ರವಾರ ನಾಗ್ಪುರ ವೇದಿಕೆಯಾಗಿ ನಡೆದ ಆಸ್ಟ್ರೆಲಿಯಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕ್ಯಾಪ್ಟನ್ ಇನ್ನಿಂಗ್ಸ್ ಆಡಿದರು.
20 ಎಸೆತಗಳಲ್ಲಿ ನಾಲ್ಕು ಬೌಂಡರಿ, ನಾಲ್ಕು ಸಿಕ್ಸರ್ ಗಳೊಂದಿಗೆ 46 ರನ್ ಗಳನ್ನು ಗಳಿಸಿ ಅಜೇಯರಾಗಿ ನಿಂತರು.
ಈ ಕ್ರಮದಲ್ಲಿ ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ಸಿಕ್ಸರ್ ಗಳನ್ನು ಬಾರಿಸಿದ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.
ಮ್ಯಾಚ್ ನಲ್ಲಿ ನಾಲ್ಕು ಸಿಕ್ಸರ್ ಗಳನ್ನು ಬಾರಿಸಿದ ರೋಹಿತ್ ಶರ್ಮಾ, ಒಟ್ಟಾರೆ 176 ಸಿಕ್ಸರ್ ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ನ್ಯೂಜಿಲೆಂಡ್ ನ ಓಪನರ್ ಮಾರ್ಟಿನ್ ಗಪ್ಟಿಲ್ 172 ಸಿಕ್ಸರ್ ಗಳನ್ನು ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ 124 ಸಿಕ್ಸರ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ವಿರಾಟ್ ಕೊಹ್ಲಿ 104 ಸಿಕ್ಸರ್ ಗಳೊಂದಿಗೆ ಟೀಂ ಇಂಡಿಯಾ ಪರ ಟಿ 20 ಕ್ರಿಕೆಟ್ ನಲ್ಲಿ ನೂರು ಸಿಕ್ಸರ್ ಗಳನ್ನು ಸಿಡಿಸಿರುವ ಎರಡನೇ ಬ್ಯಾಟರ್ ಆಗಿದ್ದಾರೆ.
ಮ್ಯಾಚ್ ವಿಚಾರಕ್ಕೆ ಬಂದರೇ ಮಳೆಯಿಂದಾಗಿ ಪಂದ್ಯವನ್ನು 8 ಓವರ್ ಗಳಿಗೆ ಸೀಮಿತಗೊಳಿಸಿದರು.
ಮೊದಲು ಬ್ಯಾಟ್ ಮಾಡಿದ ಆಸೀಸ್ ಐದು ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿತ್ತು.
ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 7.2 ಓವರ್ ಗಳಲ್ಲಿ ಗುರಿ ಮುಟ್ಟಿತು. ರೋಹಿತ್ ಶರ್ಮಾ 42 ರನ್ ಗಳನ್ನು ಚಚ್ಚಿದರು.