ರೋಹಿತ್ ಕ್ಯಾಪ್ಟನ್ ಆಗದಿದ್ದರೇ ದೇಶಕ್ಕೆ ನಷ್ಟ
ನವದೆಹಲಿ : ಐಪಿಎಲ್ ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುತ್ತಿದ್ದಂತೆ ಟೀಂ ಇಂಡಿಯಾದ ನಾಯಕತ್ವ ಬದಲಾವಣೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಮುಂಬೈ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ್ದು, ಅವರು ಟೀಂ ಇಂಡಿಯಾದ ನಾಯಕನಾಗದಿದ್ದರೇ ದೇಶಕ್ಕೆ ನಷ್ಟ ಎಂದು ಮಾಜಿ ಆಟಗಾರ ಸಂಸದ ಗೌತಮ್ ಗಂಭೀರ್ ಅಭಿಪ್ರಾಯ ಪಟ್ಟಿದ್ದಾರೆ.
ನಿನ್ನೆ ಮುಂಬೈ ಫೈನಲ್ ನಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಟ್ವೀಟ್ ಮಾಡಿದ್ದ ಇಂಗ್ಲೆಂಡ್ ತಂಡ ಮಾಜಿ ನಾಯಕ ಮೈಕಲ್ ವಾನ್, ರೋಹಿತ್ ಶರ್ಮಾರನ್ನ ಟೀಂ ಇಂಡಿಯಾ ಟಿ20 ತಂಡಕ್ಕೆ ಕ್ಯಾಪ್ಟನ್ ಮಾಡಬೇಕು ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ಇದೀಗ ಗೌತಮ್ ಗಂಭೀರ್ ಕೂಡ ರೋಹಿತ್ ಪರ ಬ್ಯಾಟ್ ಬೀಸಿದ್ದಾರೆ.
ರೋಹಿತ್ ಶರ್ಮಾ ಅವರಿಗೆ ಏಕದಿನ ಮತ್ತು ಟಿ 20 ಮಾದರಿ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ನಾಯಕತ್ವ ನೀಡಬೇಕು.
ಮತ್ತಷ್ಟು ರಂಗೇರಲಿದೆ ಮುಂದಿನ ಐಪಿಎಲ್ : ಹೊಸ ತಂಡ ಸೇರ್ಪಡೆ
ಅವರಿಗೆ ನಾಯಕತ್ವ ನೀಡದಿದ್ದರೇ ಆತನಿಗೆ ನಷ್ಟವಿಲ್ಲ. ಆದ್ರೆ ಅದು ಭಾರತಕ್ಕೆ ನಷ್ಟವಾಗಲಿದೆ.
ನಾಯಕತ್ವದ ಜವಾಬ್ದಾರಿಯನ್ನು ರೋಹಿತ್ ಶರ್ಮಾಗೆ ನೀಡಿದರೆ ಆತ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಾನೆ ಎಂದು ಗೌತಮ್ ಅಭಿಪ್ರಾಯಪಟ್ಟಿದ್ದಾರೆ.
ನಾನು ಕೊಹ್ಲಿಯನ್ನು ಉತ್ತಮ ನಾಯಕ ಅಲ್ಲ ಎಂದು ಹೇಳುತ್ತಿಲ್ಲ. ಕೊಹ್ಲಿ, ರೋಹಿತ್ ಇಬ್ಬರೂ ಐಪಿಎಲ್ ನಲ್ಲಿ ನಾಯಕರಾಗಿ ತಂಡಗಳನ್ನು ಮುನ್ನಡೆಸುತ್ತಿದ್ದಾರೆ.
ನನ್ನ ದೃಷ್ಟಿಯಲ್ಲಿ ರೋಹಿತ್ ತಮ್ಮ ನಾಯಕತ್ವದಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಾರೆ ಎಂದು ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರೋಹಿತ್ ರೋರಿಂಗ್.. ವಿರಾಟ್ ಗೆ ಶಾಕಿಂಗ್…
ಇನ್ನು ಆರ್ ಸಿಬಿ ಟೂರ್ನಿಯಿಂದ ಹೊರಬಿದ್ದಾಗಲೂ ” ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲು ಇದು ಸೂಕ್ತ ಸಮಯ ಎಂದು ಗೌತಮ್ ಹೇಳಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel