ಬೆಂಗಳೂರು: ಅಫ್ಘಾನಿಸ್ತಾನ (Afghanistan) ವಿರುದ್ಧ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಶತಕ ಸಿಡಿಸುವುದರ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ.
69 ಎಸೆತಗಳಲ್ಲಿ ಸ್ಫೋಟಕ 121 ರನ್ ಸಿಡಿಸಿದ ರೋಹಿತ್ ಶರ್ಮಾ, 11 ಬೌಂಡರಿ, 8 ಸಿಕ್ಸರ್ ಸಿಡಿಸಿದ್ದಾರೆ. ಅಲ್ಲದೇ, 2 ಸೂಪರ್ ಓವರ್‌ಗಳಲ್ಲಿ 3 ಸಿಕ್ಸರ್ ಸಿಡಿಸಿದ್ದಾರೆ. ಈ ಮೂಲಕ ತಂಡವೊಂದರ ನಾಯಕನಾಗಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ನಂ.1 ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧ ನಡೆದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ರೋಹಿತ್, ಶೂನ್ಯಕ್ಕೆ ಔಟ್ ಆಗಿದ್ದರು. ಕೊನೆಯ ಪಂದ್ಯದಲ್ಲಿ ಮೊದಲ 10 ಓವರ್ ಗಳವರೆಗೂ ತಾಳ್ಮೆಯ ಆಟವಾಡಿದ್ದ ರೋಹಿತ್, 10 ಓವರ್‌ಗಳ ನಂತರ ಸ್ಫೋಟಕ ಇನ್ನಿಂಗ್ಸ್‌ಗೆ ಮುಂದಾದರು. ಸಿಕ್ಸರ್, ಬೌಂಡರಿ ಸಿಡಿಸುವ ಮೂಲಕ ಅಫ್ಘಾನ್ ಬೌಲರ್‌ಗಳ ಬೆವರಿಳಿಸಿದರು.
ನಾಕಯಕನಾಗಿ ಅತಿಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿ…
ರೋಹಿತ್ ಶರ್ಮಾ (ಭಾರತ) – 90 ಸಿಕ್ಸರ್,
ಇಯಾನ್ ಮಾರ್ಗನ್ (ಇಂಗ್ಲೆಂಡ್) – 86 ಸಿಕ್ಸರ್,
ಆರನ್ ಫಿಂಚ್ (ಆಸ್ಟ್ರೇಲಿಯಾ) – 82 ಸಿಕ್ಸರ್,
ವಿರಾಟ್ ಕೊಹ್ಲಿ (ಭಾರತ) – 59 ಸಿಕ್ಸರ್
ಅಫ್ಘಾನ್ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ 64 ಎಸೆತಗಳಲ್ಲೇ ಸೆಂಚುರಿ ಬಾರಿಸಿದ ರೋಹಿತ್ ಶರ್ಮಾ 4 ಅಂತಾರಾಷ್ಟ್ರೀಯ ಶತಕಗಳನ್ನು ಸಿಡಿಸಿದ್ದ ಸೂರ್ಯಕುಮಾರ್ ಯಾದವ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ದಾಖಲೆ ಹಿಂದಿಕ್ಕಿದರು.








