ENG vs IND : ಟೀಂ ಇಂಡಿಯಾಗೆ ಗುಡ್ ನ್ಯೂಸ್… ಬರ್ತಿದ್ದಾನೆ ಹಿಟ್ ಮ್ಯಾನ್
ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಗೂ ಮುನ್ನಾ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ.
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೂ ಮುನ್ನಾ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೊರೊನಾ ಸೋಂಕಿಗೆ ತುತ್ತಾಗಿದ್ದರು.
ಇದೀಗ ಅವರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಕೋವಿಡ್ ಟೆಸ್ಟ್ ನಲ್ಲಿ ಅವರ ರಿಸಲ್ಟ್ ನೆಗೆಟಿವ್ ಬಂದಿದೆ.
ಹೀಗಾಗಿ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ 20, ಏಕದಿನ ಸರಣಿಗೆ ಲಭ್ಯವಾಗಲಿದ್ದಾರೆ.
ಇನ್ನು ಜುಲೈ 7 ರಂದು ಎಡ್ಜ್ ಬಸ್ಟನ್ ನಲ್ಲಿ ಮೊದಲ ಟಿ 20 ಪಂದ್ಯ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧದ ಟಿ 20, ಏಕದಿನ ಸಿರೀಸ್ ಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ.
ಆದ್ರೆ ಇಂಗ್ಲೆಂಡ್ ವಿರುದ್ಧದ ಮೊದಲ ಟಿ 20 ಪಂದ್ಯಕ್ಕಾಗಿ ಐರ್ಲೆಂಡ್ ವಿರುದ್ಧ ಸೆಣಸಿದ್ದ ತಂಡವನ್ನೇ ಬಿಸಿಸಿಐ ಪ್ರಕಟಿಸಿದೆ.

ಮೊದಲ 20 ರ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್
ಎರಡು ಮತ್ತು ಮೂರು ಟ್ವೆಂಟಿ-20 ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ ಪಟ ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್
ಏಕದಿನ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವಿಂದ್ ಚಹಲ್, ಜಸ್ಪ್ರಿತ್ ಬಿ ಚಾಹಲ್, ಅಕ್ಷರ್ ಬಿ ಚಾಹಲ್, ಪ್ರಸಿದ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್