Roopa vs rohini : ಡಿ.ರೂಪಾ ಮೌದ್ಗಿಲ್ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ…
ಕಳೆದ ಕೆಲವು ದಿನಗಳಿಂದ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ರಾಜ್ಯದ್ಯಂತ ಸುದ್ದಿ ಮಾಡಿತ್ತು. ಮಧ್ಯಪ್ರವೇಶಿಸಿದ್ದ ಸರ್ಕಾರ ಇಬ್ಬರಿಗೂ ವರ್ಗಾವಣೆ ಶಿಕ್ಷೆ ನೀಡಿ ನೋಟೀಸ್ ಕೊಟ್ಟ ನಂತರ ಸುದ್ದಿ ತಣ್ಣಗಾಗಿಗಿತ್ತು.
ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಬೆಂಗಳೂರು ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ನನ್ನ ವಿರುದ್ಧ ರೂಪ ಮೌದ್ಗಿಲ್ ಅವರು ಫೇಸ್ಬುಕ್, ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ವಿರುದ್ಧ ಸುಳ್ಳು ಆರೋಪಗಳನ್ನ ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂ.ಗಳನ್ನು ಪರಿಹಾರವಾಗಿ ಕೊಡಿಸಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಮೊಕದ್ದಮೆಯ ವಿಚಾರಣೆಯನ್ನು ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ಮಂಗಳವಾರ ನಡೆಸಿದರು. ಅರ್ಜಿದಾರರ ವಾದವನ್ನು ಪರಿಗಣಿಸಿರುವ ನ್ಯಾಯಾಲಯವು ಮೊಕದ್ದಮೆಯನ್ನ ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 3ಕ್ಕೆ ಮುಂದೂಡಿದೆ.