====ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೆ ಬಂಧನ ಭೀತಿ..? ====
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಂದು ಬೆಳಗ್ಗೆ 11.30ಕ್ಕೆ ರೋಷನ್ ಬೇಗ್‍ರನ್ನ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಅವರ ಮನೆಯಿಂದ ಕರೆತಂದು ಸುದೀರ್ಘ ವಿಚಾರಣೆ ನಡೆಸಿದ್ದರು. ಸತತ 8 ಗಂಟೆಗಳ ಕಾಲ ವಿಚಾರಣೆ ಬಳಿಕ ರೋಷನ್ ಬೇಗ್‍ರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ರೋಷನ್ ಬೇಗ್ ಅವರನ್ನು ಕೋರಮಂಗಲದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾಜಿ ಶಾಸಕ ರೋಷನ್ ಬೇಗ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ.
ರೋಷನ್ ಬೇಗ್ ಹೆಸರು ತಳುಕು ಹಾಕಿದ್ಹೇಗೆ..?
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಹೆಸರು ತಳಕು ಹಾಕಿ ಕೊಂಡಿತ್ತು. ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಶಾಮೀಲಾಗಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಸ್‍ಐಟಿ ತನಿಖೆಗೆ ಒಪ್ಪಿಸಿದ್ದರು.
ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎನ್ನಲಾಗಿದೆ. ಐಷಾರಾಮಿ ಕಾರು ಸೇರಿದಂತೆ ಬಹುತೇಕ ಬೆಲೆ ಬಾಳುವ ವಸ್ತುಗಳನ್ನು ಮನ್ಸೂರ್ ಖಾನ್ ರೋಷನ್ ಬೇಗ್‍ಗೆ ಉಡುಗೊರೆಯಾಗಿ ನೀಡಿದ್ದ ಎಂಬ ಆರೋಪ ಕೇಳಿ ಬಂದಿತ್ತು.
ಶಿವಾಜಿನಗರದ ಕಾಂಗ್ರೆಸ್ ಶಾಸಕರಾಗಿದ್ದ ರೋಷನ್ ಬೇಗ್, ಮೈತ್ರಿ ಸರ್ಕಾರದಲ್ಲಿ ಶಾಸಕರ ಅಸಮಾಧಾನ ಸ್ಫೋಟಗೊಂಡಾಗ ತಾವೂ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.
ವಿಡಿಯೋ ಹರಿಬಿಟ್ಟಿದ್ಧ ಮನ್ಸೂರ್ ಅಲಿಖಾನ್..!
ಐಎಂಎ ಅಕ್ರಮದ ತನಿಖೆಗಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಎಸ್‍ಐಟಿ ರಚನೆ ಮಾಡಲಾಗಿತ್ತು. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಶಂಕರ್, ಸಹಾಯಕ ಆಯುಕ್ತ ನಾಗರಾಜ್, ಐಎಂಎ ನಿರ್ದೇಶಕರು ಸೇರಿದಂತೆ 20ಕ್ಕು ಹೆಚ್ಚು ಮಂದಿಯನ್ನು ಎಸ್‍ಐಟಿ ಪೊಲೀಸರು ಬಂಧಿಸಿದ್ದರು.
ಈ ಬೆಳೆವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಶಾಸಕರಾಗಿದ್ದ ರೋಷನ್ ಬೇಗ್ ಬೆಂಗಳೂರು ಬಿಟ್ಟು ಪರಾರಿಯಾಗಲು ಕೆಂಪೇಗೌಡ airport ನಲ್ಲಿ ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಒಂದುದಿನ ಪೂರ್ತಿ ರೋಷನ್ ಬೇಗ್ ವಿಚಾರಣೆ ಮಾಡಿ ಅಧಿವೇಷನ ನಡೆಯುತ್ತಿದ್ದರಿಂದ ರೋಷನ್ ಬೇಗ್ ಬಿಟ್ಟು ಕಳಿಸಲಾಗಿತ್ತು. ಮೈತ್ರಿ ಸರ್ಕಾರ ಪತನ ಬಳಿಕ ಐಎಂಎ ಅಕ್ರಮದ ತನಿಖೆಯನ್ನು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು.
ಸಿಬಿಐ ಅಧಿಕಾರಿಗಳು ಐಎಂಎ ಸಂಸ್ಥಾಪಕ ಮನ್ಸೂರ್ ಅಲಿಖಾನ್‍ನನ್ನು ವಂಚನೆ ಪ್ರಕರಣದಲ್ಲಿ ಬಂಧಿಸಿದ್ದರು. ಬಂಧನಕ್ಕೂ ಮೊದಲೇ ರೋಷನ್‍ಬೇಗ್ ಹಣ ಪಡೆದಿದ್ದಾರೆಂದು ಆರೋಪಿಸಿದ್ದ ವಿಡಿಯೋ ಹರಿ ಬಿಟ್ಟಿದ್ದ.
ಪ್ರಕರಣ ಸಿಬಿಐಗೆ ವರ್ಗಾವಣೆಯಾದ ಹಲವು ದಿನಗಳ ತನಿಖೆ ನಂತರ ರೋಷನ್ ಬೇಗ್ ಅವರನ್ನು ಇಂದು ವಿಚಾರಣೆಗೆ ಒಳಪಡಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಧೀಶರ ಮುಂದೆ ರೋಷನ್ ಬೇಗ್ ಅವರನ್ನು ಹಾಜರುಪಡಿಸಲಾಯಿತು. ನ್ಯಾಯಾಧೀಶರು ರೋಷನ್ ಬೇಗ್‍ರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ರೋಷನ್ ಬೇಗ್‍ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.
ಮುಂದಿನ ಟಾರ್ಗೆಟ್ ಜಮೀರ್ ಅಹ್ಮದ್ ಖಾನ್..?
ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಬಂಧನ ಬಳಿಕ ಚಾಮರಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೂ ಸಿಬಿಐನ ಬಂಧನ ಭೀತಿ ಎದುರಾಗಿದೆ.
ಈಗಾಗಲೇ ಐಎಂಎ ವಂಚನೆ ಕೇಸ್ ನಲ್ಲಿ ಜಮೀರ್ ಅಹ್ಮದ್‍ರನ್ನು ಸಿಬಿಐ ಅಧಿಕಾರಿಗಳು ನಾಲ್ಕು ಬಾರಿ ವಿಚಾರಣೆ ಮಾಡಿದ್ದಾರೆ. ರೋಷನ್‍ಬೇಗ್‍ಗೆ ಜೈಲಿನ ತೋರಿಸುತ್ತಿದ್ದಂತೆ ಜಮೀರ್ ಅಹ್ಮದ್‍ಗೂ ಬಂಧನ ಭೀತಿ ಶುರುವಾಗಿದೆ ಎನ್ನಲಾಗಿದೆ. ಹೀಗಾಗಿ ರೋಷನ್ ಬೇಗ್ ಬಳಿಕ ಮುಂದಿನ ದಿನಗಳಲ್ಲಿ ಸಿಬಿಐ ಮತ್ಯಾರಿಗೆ ಶಾಕ್ ನೀಡುತ್ತದೆ ಎಂದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel