ಕೋಲಾರ: ಹಲವಾರು ಪ್ರಕರಣಗಳಲ್ಲಿ ಬೆಂಗಳೂರಿನ ನಂದಿನಿ ಲೇಔಟ್ ಹಾಗೂ ಸಿಸಿಬಿ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಸುಪಾರಿ ಕಿಲ್ಲರ್ಸ್ ಬಂಧಿಸಲು ಹೋದಾಗ ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಫಿಲ್ಮಿ ಸ್ಟೈಲಲ್ಲಿ ಪರಾರಿಯಾದ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ನಗರದ ಅರಹಳ್ಳಿ ಗೇಟ್ ಬಳಿ ಸುಪಾರಿ ಹಂತಕರನ್ನು ಬಂಧಿಸಲು ಪೊಲೀಸರು ಸಜ್ಜಾಗಿದ್ದರು. ಈ ವೇಳೆ ಪೊಲೀಸರ ಮೇಲೆಯೇ ರೌಡಿಗಳು ಲಾಂಗು ಮತ್ತು ರಾಡ್‍ಗಳಿಂದ ದಾಳಿ ಮಾಡಿದ್ದಾರೆ. ಪೊಲೀಸರು ತಮಗೆ ಆಗುವ ಅಪಾಯವನ್ನು ತಪ್ಪಿಸಿಕೊಳ್ಳಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸರು ತಂದಿದ್ದ ಇನೋವ ಕಾರಿನ ಕಿಟಕಿ ಗಾಜುಗಳನ್ನು ಸುಪಾರಿ ಕಿಲ್ಲರ್ಸ್ ಪುಡಿ ಪುಡಿ ಮಾಡಿ ಜಖಂಗೊಳಿಸಿದ್ದಾರೆ.
ಬೆಂಗಳೂರಿನ ಕೆ.ಜಿ ಹಳ್ಳಿ ವ್ಯಾಪ್ತಿಯ ಕೊಲೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ನಂದಿನಿ ಲೇಔಟ್ ಪೊಲೀಸರು ಆರೋಪಿಗಳನ್ನು ಬೆಂಗಳೂರಿನಲ್ಲೇ ಬಂಧಿಸಲು ಮುಂದಾಗಿದ್ದಾರೆ.
ಪೊಲೀಸರು ತಮ್ಮನ್ನು ಬೇಟೆಯಾಡುವ ಸುಳಿವು ಅರಿತ ಆರೋಪಿಗಳು ಅಲ್ಲಿಂದ ಕಾಲು ಕಿತ್ತು ಕಾರಿನಲ್ಲಿ ಮಾರಾಕಾಸ್ತ್ರಗಳೊಂದಿಗೆ ಕೋಲಾರದ ಕಡೆಗೆ ಬಂದಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಪೊಲೀಸರು ಕೋಲಾರಕ್ಕೆ ಬಂದಿದ್ದಾರೆ.
ಇನ್ನೇನು ಆರೋಪಿಗಳು ಸಿಕ್ಕೇಬಿಟ್ಟರು ಎನ್ನುವ ಸಂದರ್ಭದಲ್ಲಿ ಆರೋಪಿಗಳು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಫ್ತಿಯಲ್ಲಿದ್ದ ಇಬ್ಬರು ಪೊಲೀಸರ ಮೇಲೆ ರೌಡಿಗಳು ಲಾಡ್‍ನಿಂದ ಹಲ್ಲೆಯನ್ನೂ ಮಾಡಿದ್ದಾರೆ. ಈ ಸಮಯದಲ್ಲಿ ಪೊಲೀಸರ ಖಾಸಗಿ ಕಾರನ್ನೂ ಜಖಂಗೊಳಿಸಿದ್ದಾರೆ.
ಸಿಸಿಬಿ ಪಿಎಸ್‍ಐ ನಾವಿದ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಂತೆ ಆರೋಪಿಗಳು ಕಾರನ್ನು ಅಲ್ಲಿಯೇ ಬಿಟ್ಟು ಸ್ಥಳೀಯರೊಬ್ಬರಿಗೆ ಚಾಕು ತೋರಿಸಿ ಬೈಕ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಯಾರೋ ಕೈಯಲ್ಲಿ ಗನ್ ಹಿಡಿದು ಗಲಾಟೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಕೂಡ ಸಿಸಿಬಿ ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದಾರೆ. ನಾವು ಮಫ್ತಿಯಲ್ಲಿರುವ ಪೊಲೀಸರು, ಆರೋಪಿಗಳನ್ನು ಹಿಡಿಯಲು ಬಂದಿದ್ದೇವೆ ಎಂದು ಹೇಳಿದರೂ ಕೇಳದ ಸ್ಥಳೀಯರು ಪೊಲೀಸರ ಮೇಲೆ ತಿರುಗಿ ಬಿದ್ದಿದ್ದಾರೆ.
ನಂತರ ಗಲ್‍ಪೇಟೆ ಪೊಲೀಸರ ಬಂದು ಸ್ಥಳೀಯರಿಗೆ ಮನವರಿಕೆ ಮಾಡಿ ಅಲ್ಲಿಂದ ಜಾಗ ಖಾಲಿ ಮಾಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ, ಹೆಚ್ಚುವರಿ ಎಸ್ಪಿ ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಹಿಡಿಯಲು ನಂದಿನಿ ಲೇಔಟ್ ಪೊಲೀಸರ ಹಾಗೂ ಕೋಲಾರದ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…
5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....