ಬೆಂಗಳೂರಿನಲ್ಲಿ ಹಾಡ ಹಗಲೇ ರೌಡಿ ಶೀಟರ್ ಹತ್ಯೆ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡ ಹಗಲೇ ನೆತ್ತರು ಹರಿದಿದ್ದು, ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಕೊಲೆಯಾಗಿದೆ.
ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲಿ ಈ ಘಟನೆ ನಡೆದಿದೆ.
ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಕರಿ ಸೀನ ಹತ್ಯೆಯಾದವನಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ರಾಜಗೋಪಾಲ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀನಿವಾಸ್ ನನ್ನು ಮಾರಕಾಸ್ತ್ರದಿಂದ ಹಲ್ಲೆಗೈದ ದುಷ್ಕರ್ಮಿಗಳು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಓಡಿ ಹೋಗಿದ್ದಾರೆ.
ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಕರಿ ಸೀನನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಹಳೆದ್ವೇಷದ ಹಿನ್ನೆಲೆ ಕೊಲೈಗೈದಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಗೋಪಾಲ ನಗರ ಪೊಲೀಸರು, ಆರೋಪಿಗಳಿಗಾಗಿ ಶೋಧ ಕಾರ್ಯ ಶುರು ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









