ಮಾರಕಾಸ್ತ್ರಗಳಿಂದ ರೌಡಿಶೀಟರ್ನ ಹತ್ಯೆ
ಬಳ್ಳಾರಿ: ರೌಡಿಶೀಟರ್ನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಬಳ್ಳಾರಿಯ ಹಾವಂಭಾವಿ ಪ್ರದೇಶದಲ್ಲಿ ನಡೆದಿದೆ.
ಮಹೇಂದ್ರ (34) ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದು, ಭಾನುವಾರ ರಾತ್ರಿ ಹತ್ಯೆ ಮಾಡಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು:? ಜಾಮೀನಿನ ಮೇಲೆ ಹೊರಗಡೆ ಬಂದಿದ್ದ ಆರೋಪಿ ಮಹೇಂದ್ರ ನಿನ್ನೆ ರಾತ್ರಿ ಮನೆಗೆ ತೆರಳುತ್ತಿದ್ದ. ಈ ವೇಳೆ ಹಾವಂಭಾವಿ ಪ್ರದೇಶದಲ್ಲಿ 20ಕ್ಕೂ ಹೆಚ್ಚು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂತರ ಮಹೇಂದ್ರನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಹತ್ಯೆಗೀಡಾದ ಮಹೇಂದ್ರ, ತಾಂಡಾ ರಮೇಶ ಎಂಬಾತನ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಇತ್ತಿಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ. ಈ ಹಿಂದೆಯೇ ಮೂರು ಬಾರಿ ಮಹೇಂದ್ರನ ಕೊಲೆಗೆ ಯತ್ನಿಸಲಾಗಿತ್ತು.
ಹಳೆ ದ್ವೇಷ, ಜೊತೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆಗಿದ್ದೇ ಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.