Kannada Rajyotsava – ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭ ಕೋರಿದ RCB ಆಟಗಾರರು
ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂಭ್ರಮ ರಾಜ್ಯದೆಲ್ಲೆಡೆ ಮನೆ ಮಾಡಿದೆ. ಎಲ್ಲೆಲ್ಲೂ ಕನ್ನಡ ಬಾವುಟಗಳು ಹಾರಾಡುತ್ತಿವೆ.
ಈ ನಡುವೆ ಇಂಡಿಯಲ್ ಪ್ರಿಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದೆ.

ಆರ್ ಸಿಬಿಯ ನಾಯಕ ಫಾಫ್ ಡುಪ್ಲಸಿಸ್, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ವನಿಂದು ಹಸರಂಗ ಸೇರಿದಂತೆ ಹಲವು ಆಟಗಾರರು ಕನ್ನಡದಲ್ಲಿಯೇ ರಾಜ್ಯೋತ್ಸವದ ಶುಭ ಕೋರುವ ಮೂಲಕ ಗಮನ ಸೆಳೆದಿದ್ದಾರೆ.
ಇದೇ ನಾಡು ಇದೇ ಭಾಷೆ, ಎಂದೆಂದೂ ನಮ್ಮದಾಗಿರಲಿ, ಎಲ್ಲೇ ಇರಲಿ ಹೇಗೆ ಇರಲಿ, ಕನ್ನಡವೇ ನಮ್ಮ ಉಸಿರಲ್ಲಿ! 🟡🔴
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! 🙏😃#PlayBold #KarnatakaRajyotsava #KannadaRajyotsava #ಕರ್ನಾಟಕರಾಜ್ಯೋತ್ಸವ #ಕನ್ನಡರಾಜ್ಯೋತ್ಸವ pic.twitter.com/hyHVSmb59h
— Royal Challengers Bangalore (@RCBTweets) November 1, 2022
ಈ ವಿಡಿಯೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಆರ್ ಸಿಬಿ ತನ್ನ ಟ್ವೀಟ್ ನಲ್ಲಿ.. ಇದೇ ನಾಡು ಇದೇ ಭಾಷೆ, ಎಂದೆಂದೂ ನಮ್ಮದಾಗಿರಲಿ, ಎಲ್ಲೇ ಇರಲಿ ಹೇಗೆ ಇರಲಿ, ಕನ್ನಡವೇ ನಮ್ಮ ಉಸಿರಲ್ಲಿ! ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದೆ.