Rozgar Mela: ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ, 75 ಸಾವಿರ ಜನರಿಗೆ ನೇಮಕಾತಿ ಪತ್ರ ವಿತರಣೆ…
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ 75 ಸಾವಿರ ಮಂದಿಗೆ ಏಕಕಾಲಕ್ಕೆ ನೇಮಕಾತಿ ಪತ್ರ ವಿತರಿಸಲಾಯಿತು. ಮೋದಿ ಅವರು ಕೆಲವು ತಿಂಗಳ ಹಿಂದೆ 10 ಲಕ್ಷ ಉದ್ಯೋಗ ಸೃಷ್ಟಿಯಬಗ್ಗೆ ಮಾತನಾಡಿದ್ದರು. ಮುಂದಿನ ಒಂದೂವರೆ ವರ್ಷಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ವಿವಿಧ ಸಚಿವಾಲಯಗಳಿಗೆ ಕೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 50 ಸ್ಥಳಗಳಲ್ಲಿ 75 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಯುವಕರಿಗೆ ಹಸ್ತಾಂತರಿಸಿದರು. ಇದರೊಂದಿಗೆ ಮುಂದಿನ ತಿಂಗಳುಗಳಲ್ಲಿ ಈ ಸಂಖ್ಯೆ 10 ಲಕ್ಷಕ್ಕೆ ಏರಲಿದೆ. ಈ ಎಲ್ಲ ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಸಿಗಲಿದೆ. ಪ್ರಧಾನಿ ಮೋದಿಯವರ ಈ ಅಭಿಯಾನದಿಂದ ಯುವಕರು ಕೂಡ ಸಂತಸಗೊಂಡಿದ್ದು, ಸರ್ಕಾರದ ಈ ಹೆಜ್ಜೆ ಯುವಕರನ್ನು ಉತ್ತೇಜಿಸುತ್ತದೆ ಮತ್ತು ಹೊಸ ಉದ್ಯೋಗಾವಕಾಶಗಳು ಬರಲಿವೆ ಎಂದು ಅವರು ಹೇಳಿದ್ದಾರೆ.
ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಕೇಂದ್ರ ಸರ್ಕಾರ 75 ಸಾವಿರ ಯುವಕರಿಗೆ ನೇಮಕಾತಿ ಪತ್ರ ನೀಡುತ್ತಿದೆ. ಕಳೆದ 8 ವರ್ಷಗಳಲ್ಲಿ ಈಗಾಗಲೇ ಲಕ್ಷಾಂತರ ಯುವಕರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಈಡೇರಿಕೆಗಾಗಿ ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ನಡೆಯುತ್ತಿದ್ದೇವೆ. ಅಂತೆಯೇ, ಮುಂಬರುವ ತಿಂಗಳುಗಳಲ್ಲಿ ಭಾರತ ಸರ್ಕಾರವು ಕಾಲ ಕಾಲಕ್ಕೆ ಲಕ್ಷಗಟ್ಟಲೆ ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದೆ ಎಂದು ಮಾತನಾಡಿದ್ದಾರೆ.
Rozgar Mela: Prime Minister Modi drives for job fair, distribution of appointment letters to 75 thousand people…








