ಚಲಿಸುತ್ತಿದ್ದ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ – RPF ನಿಂದ ಸಹಾಯ
ಅಹಮದಾಬಾದ್- ಬರೌನಿ ಎಕ್ಸ್‌ಪ್ರೆಸ್‍ನಲ್ಲಿ ಮುಜಾಫರ್‍ಪುರಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯ ಸಹಾಯದಿಂದ ಬುಧವಾರ ಮಗುವಿಗೆ ಜನ್ಮ ನೀಡಿದ್ದಾರೆ.
ಸೂರತ್‍ನಿಂದ ಮುಜಾಫರ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಶಕೀಲಾ ಅವರಿಗೆ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಪತಿ ತಕ್ಷಣವೇ ಟಿಟಿಇಗೆ ಮಾಹಿತಿ ನೀಡಿದ್ದಾರೆ.ನಂತರ ಮಹಿಳೆ ಇದ್ದ ಬೋಗಿಗೆ ಬಂದ ಇಡೀ ಆರ್‌ಪಿಎಫ್ ತಂಡ ಆಗಮಿಸಿ ಗರ್ಭಿಣಿ ಇದ್ದ ಇಡೀ ಕೋಚ್ ಅನ್ನ ವಶಕ್ಕೆ ಪಡೆದು ಅವರಿಗೆ ಸಹಾಯ ಮಾಡಿದೆ ಎಂದು ಮಹಿಳೆ ಪತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ರೈಲು ಮುಜಾಫರ್‌ಪುರ ಜಂಕ್ಷನ್‍ಗೆ ಬಂದ ಬಳಿಕ ತಾಯಿ ಮತ್ತು ಮಗು ಇಬ್ಬರನ್ನೂ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದೀಗ ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.








