ಬೆಂಗಳೂರು : ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ಗೆ ಅವಕಾಶ ನೀಡಬಾರದು ಎಂದು ಬಿಜೆಪಿಯ ನಾಯಕ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್( supreme court ) ವಜಾ ಮಾಡಿದೆ. ಸುಪ್ರೀಂ ಕೋರ್ಟ್ ( supreme court ) ತೀರ್ಪಿನ ಬಗ್ಗೆ ಬಿಜೆಪಿ ಮುಖಂಡ ಮುನಿರತ್ನ (muniratna) “ಇಂದು ಸುಪ್ರೀಂಕೋರ್ಟ್ ನ್ಯಾಯದ ಪರವಾಗಿ ತೀರ್ಪು ನೀಡಿದೆ” ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ (muniratna) , ಈ ಪ್ರಕರಣ ಕೋರ್ಟ್ ನಲ್ಲಿದ್ದ ಕಾರಣ ನಾನು ಇದರ ಬಗ್ಗೆ ಮಾತನಾಡಿರಲಿಲ್ಲ. ಇಂದು ಸುಪ್ರೀಂ ಕೋರ್ಟ್ ನ್ಯಾಯದ ಪರ ತೀರ್ಪು ನೀಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ತೆಗೆದುಕೊಂಡ ಎಲ್ಲ ಮತಗಳು ಅಸಲಿ ಎಂದು ಹೇಳಿದೆ. ಚುನಾವಣಾ ಆಯೋಗದಿಂದ ಹಿಡಿದು ಎಲ್ಲ ತನಿಖೆಗಳು ನಕಲಿ ಮತಗಳು ಚಲಾವಣೆಯಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.
ಮಾಧ್ಯಮ, ಸಾರ್ವಜನಿಕರು ಮತಗಳು ನಕಲಿ ಎಂದು ಪ್ರಶ್ನಿಸಿದಾದ ನೋವು ಆಗುತ್ತಿತ್ತು. ನಕಲಿ ಅಂದಾಗ ಅನುಭವಿಸಿದ ನೋವು ನನಗೆ ಗೊತ್ತು. ಮುನಿರತ್ನಗೆ ಬಂದಿರುವ ಎಲ್ಲ ಮತಗಳು ಅಸಲಿ ಎಂಬುವುದು ಇಂದು ಸಾಬೀತಾಗಿದೆ ಎಂದರು.
ಇದನ್ನೂ ಓದಿ : ಮುನಿರತ್ನಗೆ ಬಿಗ್ ರಿಲೀಫ್ ಕೊಟ್ಟ `ಸುಪ್ರೀಂ ತೀರ್ಪು’
ಇದೇ ವೇಳೆ ತುಳಸಿ ಮುನಿರಾಜು ಅವರ ಬಗ್ಗೆ ಮಾತನಾಡಿದ ಮುನಿರತ್ನ, ನನ್ನ ವಿರುದ್ಧ ಅರ್ಜಿ ಸಲ್ಲಿಸಿದ್ದ ತುಳಸಿ ಮುನಿರಾಜು ಗೌಡ ಸಹ ಬಿಜೆಪಿಯಲ್ಲಿಯೇ ಇದ್ದಾರೆ.
ಮುಂದೆ ಪಕ್ಷದಲ್ಲಿ ಜೊತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತೇವೆ. ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯದಾಗಲಿ. ಚುನಾವಣೆಯಲ್ಲಿ ಒಬ್ಬರ ಮೇಲೆ ಒಬ್ಬರು ಮಾತನಾಡೋದು ಸಹಜ.
ಚುನಾವಣಾ ಮತ್ತು ರಾಜಕೀಯದಲ್ಲಿ ವೈಯಕ್ತಿಯ ದ್ವೇಷ ಇರಲ್ಲ. ಬಿಜೆಪಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.
ಇದನ್ನೂ ಓದಿ : ಮುನಿರತ್ನಗೆ ಬಿಗ್ ರಿಲೀಫ್ ಕೊಟ್ಟ `ಸುಪ್ರೀಂ ತೀರ್ಪು’
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








