ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಯ ಅಖಾಡಕ್ಕೆ ಕೊನೆಗೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಜ್ಞಾನಭಾರತಿ ಕೃಷ್ಣಮೂರ್ತಿ (V Krishnamurthy) ಅವರನ್ನ ತನ್ನ ಅಭ್ಯರ್ಥಿಯನ್ನಾಗಿ ಜೆಡಿಎಸ್ ಘೋಷಣೆ ಮಾಡಿದೆ. ಕೃಷ್ಣಮೂರ್ತಿ (V Krishnamurthy) ಅವರು ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕೃಷ್ಣಮೂರ್ತಿ ಅವರಿಗೆ ಟಿಕೆಟ್ ಘೋಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ನಮಗೆ ಸಮಾನ ವಿರೋಧಿಗಳು.
ಎರಡೂ ಪಕ್ಷಗಳ ವಿರುದ್ಧ ನಮ್ಮ ಹೋರಾಟ ನಡೆಯಲಿದೆ. ಕಳೆದ ಎರಡು ಚುನಾವಣೆ ಬೇರೆ ಬೇರೆ ರೀತಿ ಆಗಿದೆ. ಈ ಬಾರಿ ಬೇರೆ ರೀತಿ ಚುನಾವಣೆ ಆಗುತ್ತೆ ಅನ್ನೋ ವಿಶ್ವಾಸ ನನಗೆ ಇದೆ ಎಂದರು.
ಇದನ್ನೂ ಓದಿ : 11 ರಾಜ್ಯಸಭಾ ಸ್ಥಾನಗಳಿಗೆ ನ.9 ರಂದು ಚುನಾವಣೆ
ಇನ್ನು ಮುಂದುವರಿದು ತಮ್ಮ ಅಭ್ಯರ್ಥಿಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ.
2008 ಚುನಾವಣೆಯಲ್ಲಿ ಕೃಷ್ಣಮೂರ್ತಿ ತಂದೆ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅಂತ ನಮ್ಮ ಪರ ಕೆಲಸ ಮಾಡಿದ್ದರು. ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು.

ಇದರ ಶಾಕ್ ನಿಂದಾಗಿ ಅವರ ತಂದೆಗೆ ಹೃದಯಾಘಾತ ಸಂಭವಿಸಿ ಮೃತಪಟ್ಟರು, ಅವ್ರು ನಮ್ಮ ನಿಷ್ಠಾವಂತ ಕಾರ್ಯಕರ್ತ. ಆ ಕುಟುಂಬದ ಬಗ್ಗೆ ನನಗೆ ಅನುಕಂಪ ಇದೆ.
ಕೃಷ್ಣಮೂರ್ತಿ ನಮ್ಮ ಪಕ್ಷದ ಕಾರ್ಯಕರ್ತ. ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದಿದ್ದಾರೆ. ಹೀಗಾಗಿ ಕಾರ್ಯಕರ್ತರಿಗೆ ಟಿಕೆಟ್ ಕೊಡ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : ಸುಪ್ರೀಂಕೋರ್ಟ್ ನ್ಯಾಯದ ಪರ ತೀರ್ಪು ನೀಡಿದೆ : ಮುನಿರತ್ನ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








